Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬರ ಪರಿಹಾರಕ್ಕೆ ಕೇಂದ್ರದಿಂದ 1 ರೂಪಾಯಿ ಬಂದಿಲ್ಲ : ಸಿದ್ದರಾಮಯ್ಯ

07:06 PM Oct 28, 2023 IST | suddionenews
Advertisement

 

Advertisement

ಮಂಗಳೂರು: ರಾಜ್ಯದಲ್ಲಿ ಮುಂಗಾರು - ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಈಗಾಗಲೇ ರಾಜ್ಯದಿಂದ 216 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರದಿಂದ ತಂಡ ಕೂಡ ಬಂದು ಬರಪರಿಶೀಲನೆ ನಡೆಸಿ ಹೋಗಿದ್ದಾರೆ. ಆದರೆ ಅದಾದ ಮೇಲೆ ಯಾವುದೇ ಅಪ್ಡೇಟ್ ಆಗಿಲ್ಲ. ಇದೀಗ ಕೇಂದ್ರದಿಂದ ಬರ ಪರಿಹಾರಕ್ಕೆ ಒಂದು ರೂಪಾಯಿ ಕೂಡ ಬಂದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

 

Advertisement

ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬರಪರಿಹಾರ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದ ಬರ ಅಧ್ಯಯನಕ್ಕೆ‌ ಕೇಂದ್ರದಿಂದ ತಂಡ ಬಂದಿದೆ. ರಾಜ್ಯದಿಂದಲೂ ಎರಡು ಬಾರಿ‌ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಸುಮಾರು 30 ಸಾವಿರ ಕೋಟಿಯಷ್ಟು ಬೆಳೆನಾಶವಾಗಿದೆ. ಸುಮಾರು 17 ಸಾವಿರ ಕೋಟಿಯಷ್ಟು ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಆದರೆ ಕೇಂದ್ರದಿಂದ ಇಲ್ಲಿಯವರೆಗೂ ಒಂದು ರೂಪಾಯಿ ಬರಪರಿಹಾರ ಬಂದಿಲ್ಲ‌. ಜೊತೆಗೆ ಕೇಂದ್ರ ಸಚಿವರು ಭೇಟಿಗೂ ಅವಕಾಶ ನೀಡಿಲ್ಲ ಎಂದೇ ತಿಳಿಸಿದ್ದಾರೆ.

ಇದೇ ವೇಳೆ‌ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಆಮಿಷ ಒಡ್ಡಿದರ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ 50 ಕೋಟಿ ಹಾಗೂ ಅಧಿಕಾರದ ಆಫರ್ ನೀಡಲಾಗುತ್ತಿದೆ ಎಂಬ ಮಾಹಿತಿ ಇಲ್ಲ. ಗೃಹಸಚಿವರ ಆಮಂತ್ರಣದ ಮೇರೆಗೆ ಭೋಜನಕ್ಕೆ ಹೋಗಿದ್ದಾರೆ ವಿನಃ, ಇದರಲ್ಲಿ ಬೇರೆ ಯಾವುದೇ ರಾಜಕೀಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement
Tags :
Chief Minister Siddaramaiahfeaturedmangalurusuddioneಬರ ಪರಿಹಾರಮಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸುದ್ದಿಒನ್
Advertisement
Next Article