For the best experience, open
https://m.suddione.com
on your mobile browser.
Advertisement

ಶ್ರೀರಾಮನವಮಿಯಂದು 40 ಲಕ್ಷ ಭಕ್ತರು : ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯಾ

05:20 AM Apr 16, 2024 IST | suddionenews
ಶ್ರೀರಾಮನವಮಿಯಂದು 40 ಲಕ್ಷ ಭಕ್ತರು   ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯಾ
Advertisement

ಸುದ್ದಿಒನ್ : 500 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ನವಮಿ ಆಚರಣೆ ನಡೆಯುತ್ತಿದೆ. ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ಪ್ರಥಮ ಬಾರಿಗೆ ನಡೆಯುತ್ತಿರುವ ಶ್ರೀರಾಮ ಕಲ್ಯಾಣ ಮಹೋತ್ಸವವನ್ನು ಆಯೋಜಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ಸಕಲ ರೀತಿಯ ಸಿದ್ಧತೆ ನಡೆಸುತ್ತಿದ್ದಾರೆ.

Advertisement

ಅಯೋಧ್ಯೆಯ ಉದ್ಘಾಟನಾ ಸಮಾರಂಭದ ನಂತರ ಇದು ಮೊದಲ ಶ್ರೀರಾಮ ನವಮಿಯಾದ್ದರಿಂದ, ದೇಶಾದ್ಯಂತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಶ್ರೀರಾಮ ನವಮಿಯಂದು ಸುಮಾರು 40 ಲಕ್ಷ ಭಕ್ತರು ಅಯೋಧ್ಯೆಗೆ ಬರುತ್ತಾರೆ ಎಂದು ಟ್ರಸ್ಟ್ ಅಧಿಕಾರಿಗಳು ಅಂದಾಜಿಸಿದ್ದಾರೆ. ಇಡೀ ಅಯೋಧ್ಯಾ ನಗರವೇ ಈ ಸಂಭ್ರಮಾಚರಣೆಗೆ ಅಣಿಯಾಗುತ್ತದೆ.

ಶ್ರೀರಾಮ ನವಮಿ ಆಚರಣೆಗಾಗಿ ಅಯೋಧ್ಯೆ ನಗರವನ್ನು ಸುಂದರವಾಗಿ ಅಲಂಕರಿಸಲಾಗುತ್ತಿದೆ. ದೇಶದೆಲ್ಲೆಡೆಯಿಂದ ಲಕ್ಷಾಂತರ ರಾಮಭಕ್ತರು ಆಗಮಿಸುವ ಸಾಧ್ಯತೆಯಿದ್ದು, ನೂಕುನುಗ್ಗಲು ಆಗಬಹುದು ಎಂಬ ವಿಷಯವನ್ನು ಗಮನದಲ್ಲಿಟ್ಟುಕೊಂಡು ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ಭಕ್ತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅಯೋಧ್ಯೆ ಬಾಲರಾಮನ ದರ್ಶನದ ಸಮಯವನ್ನು ಹೆಚ್ಚಿಸಲಾಗುವುದು. ಇಂದಿನಿಂದ (ಏಪ್ರಿಲ್ 16, 17 ಮತ್ತು 18 ರಂದು) 3 ದಿನಗಳ ಕಾಲ ದರ್ಶನ ಸಮಯವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ 3 ದಿನಗಳ ಕಾಲ ಭಕ್ತರಿಗೆ ದಿನಕ್ಕೆ 20 ಗಂಟೆಗಳ ಕಾಲ ಅಯೋಧ್ಯಾ ರಾಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯದ ಟ್ರಸ್ಟ್ ಅಧಿಕಾರಿಗಳು ಏಳು ಸಾಲುಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಿದ್ದಾರೆ.

Advertisement

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದೇವಸ್ಥಾನದ ಅಧಿಕಾರಿಗಳು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ತಿಂಗಳ 15 ರಿಂದ 18 ರವರೆಗೆ ರಾಮಲಲ್ಲಾ ದರ್ಬಾರ್‌ನಲ್ಲಿ ವಿಐಪಿ ದರ್ಶನವನ್ನು ರದ್ದುಗೊಳಿಸಲಾಗಿದೆ. ನಾಲ್ಕು ದಿನಗಳ ಕಾಲ ವಿಐಪಿ ದರ್ಶನಕ್ಕೆ ವ್ಯವಸ್ಥೆ ಇರುವುದಿಲ್ಲ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಏಪ್ರಿಲ್ 15 ರಿಂದ 18ರವರೆಗೆ ನೀಡಿರುವ ವಿಐಪಿ ಪಾಸ್ ಗಳನ್ನು ರದ್ದು ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಚೈತ್ರ ಶುಕ್ಲ ಸಪ್ತಮಿ ಅಂದರೆ ಸೋಮವಾರದಿಂದ ಅಯೋಧ್ಯೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಿಐಪಿ ದರ್ಶನಕ್ಕೆ ಬ್ರೇಕ್ ಬಿದ್ದಿದೆ.

ಇಡೀ ಅಯೋಧ್ಯೆ ನಗರದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ಹನುಮಂತನಗರಿ ದೇಗುಲ ವಲಯ, ಕನಕಭವನ ಮಂದಿರ ವಲಯ, ಹೊಸ ಘಾಟ್ ವಲಯ, ನಾಗೇಶ್ವರನಾಥ ವಲಯ ಸೇರಿದಂತೆ ಎಲ್ಲ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 3 ದಿನಗಳ ಕಾಲ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಅಧಿಕಾರಿಗಳು ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಪೊಲೀಸ್, ಆರೋಗ್ಯ, ಮಹಾನಗರ ಪಾಲಿಕೆ ಮತ್ತು ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೂ ಎಚ್ಚರಿಕೆ ನೀಡಲಾಗಿದೆ. ಅಯೋಧ್ಯೆ ನಗರದಲ್ಲಿ ಪ್ರತಿ ಹಂತದಲ್ಲೂ ಸಿಸಿಟಿವಿಗಳನ್ನು ಅಳವಡಿಸಲಾಗುತ್ತಿದೆ.

Advertisement
Tags :
Advertisement