For the best experience, open
https://m.suddione.com
on your mobile browser.
Advertisement

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ..!

11:14 AM Feb 13, 2024 IST | suddionenews
ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ
Advertisement

ಶಿವಮೊಗ್ಗ: ರಾಜ್ಯದಲ್ಲಿ ಮಂಗನ ಕಾಯಿಲೆ ಸಾಕಷ್ಟು ಆತಂಕ ಸೃಷ್ಟಿ ಮಾಡುತ್ತಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗ ಆರು ದಿನದಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಆರು ಜನರಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿದೆ‌. ಜಿಲ್ಲೆಯಲ್ಲಿ ಒಟ್ಟು 32 ಮಂಗನ ಕಾಯಿಲೆಗಳು ಕಾಣಿಸಿಕೊಂಡಿರುವ ರೋಗಿಗಳಿದ್ದಾರೆ.

Advertisement

ಮಂಗನ ಕಾಯಿಲೆ ಕಾಣಿಸಿಕೊಂಡ ಆರು ಜನರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೊತೆಗೆ ರೋಗಿಗಳ ಸಂಪರ್ಕಕ್ಕೆ ಬಂದವರ ರಕ್ತಪರೀಕ್ಷೆಗೆ ಒಳಪಡಿಸಲಾಗಿದೆ. 42 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಸೂಕ್ತವಾದ ಚಿಕಿತ್ಸೆಯನ್ನು ನೀಡಲಾಗಿದೆ. ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಧೈರ್ಯದಿಂದ ಇರಿ ಎಂದು ತಾಲೂಕು ಆಸ್ಪತ್ರೆಗೆ ಜಿಲ್ಲಾ ವೈದ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಅವರು ಹೇಳಿದ್ದಾರೆ.

Advertisement

ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಇತ್ತಿಚೆಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಳು. ಒಂದು ವಾರದ ಹಿಂದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ‌ ಬೊಪ್ಪನಮನೆ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಮೃತಪಟ್ಟಿದ್ದರು. ಬೊಪ್ಪನೆಮನೆ ಗ್ರಾಮದ ನಿವಾಸಿ ಅನನ್ಯ ಮೃತ ಯುವತಿ. ಇದು ಮಂಗನ ಕಾಯಿಲೆಗೆ ಮೃತಪಟ್ಟ ಮೊದಲ ಪ್ರಕರಣವಾಗಿದೆ. ಚಳಿ ಜ್ವರದಿಂದ ಬಳಲುತ್ತಿದ್ದ ಯುವತಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ದಿನ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಈಗ ಮಂಗನ ಕಾಯಿಲೆ ಜಾಸ್ತಿಯಾಗುತ್ತಿರುವ ಕಾರಣ ಸಹಜವಾಗಿಯೇ ಜನರಿಗೆ ಆತಂಕ ಸೃಷ್ಟಿಯಾಗಿದೆ. ಜನ ಕೂಡ ಎಚ್ಚರದಿಂದ ಇರಬೇಕಾಗಿದೆ.

Tags :
Advertisement