Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮುಖ್ಯಮಂತ್ರಿಗಳ ಜನಸ್ಪಂದನ - 02 ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳ ಸ್ವೀಕಾರ

07:43 PM Feb 08, 2024 IST | suddionenews
Advertisement

 

Advertisement

ಬೆಂಗಳೂರು, ಫೆಬ್ರವರಿ 08: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.

Advertisement

ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು :
ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ,ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ - ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ.

ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Tags :
Applicationsbengaluruchief ministerChief Minister SiddaramaiahJanspandanProgrammereceivedsuddionesuddione newsಬೆಂಗಳೂರುಮುಖ್ಯಮಂತ್ರಿ  ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article