For the best experience, open
https://m.suddione.com
on your mobile browser.
Advertisement

ಡೆಂಗ್ಯೂಗೆ ಶಿವಮೊಗ್ಗದ ಮಹಿಳೆ ಬಲಿ : ಏರುತ್ತಲೇ ಇದೆ ಮಹಾಮಾರಿ..!

08:48 PM Jul 09, 2024 IST | suddionenews
ಡೆಂಗ್ಯೂಗೆ ಶಿವಮೊಗ್ಗದ ಮಹಿಳೆ ಬಲಿ   ಏರುತ್ತಲೇ ಇದೆ ಮಹಾಮಾರಿ
Advertisement

ಶಿವಮೊಗ್ಗ: ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಸರಿಯಾದ ಸ್ವಚ್ಛತೆ ಕಾಪಾಡುವುದಕ್ಕೆ ಸರ್ಕಾರ ಕೂಡ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದೆ‌. ಇದರ ಮಧ್ಯೆ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಲೆ ಇದೆ. ಇಂದು ಶಿವಮೊಗ್ಗದಲ್ಲಿ ಮಹಾಮಾರಿ ಡೆಂಗ್ಯೂಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 42 ವರ್ಷದ ರಶ್ಮಿ ಆರ್.ನಾಯಕ್ ಎಂಬ ಮಹಿಳೆ ಬಲಿಯಾಗಿದ್ದಾರೆ.

Advertisement

ಮೃತ ರಶ್ಮಿ ಹೊಸಪೇಟೆ ತಾಲೂಕಿನ ರಿಪ್ಪನ್ ಪೇಟೆ ನಿವಾಸಿಯಾಗಿದ್ದಾರೆ. ಕಳೆದ 15-20 ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆಗೆ ವೈದ್ಯರು ಕೂಡ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ರಶ್ಮಿ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ಇನ್ನು ಈಗಾಗಲೇ ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಸಾಕಷ್ಟು ತಲೆದೋರಿವೆ. ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆ ಸರಿಯಾಗಿ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅತ್ತ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅಲರ್ಟ್ ಆಗಿದ್ದಾರೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಖಡಕ್ ಸೂಚನೆ ನೀಡಿದ್ದಾರೆ. ಡೆಂಗ್ಯೂ ಪ್ರಕರಣಗಳು ಆದಷ್ಟು ಬೇಗ ನಿಯಂತ್ರಣಕ್ಕೆ ಬರಬೇಕು. ಅದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲು ಹಣ ಎಷ್ಟು ಬೇಕು ಅಂತ ಹೇಳಿದರೆ ಬೇಗ ಹಣ ಬಿಡುಗಡೆಯಾಗುತ್ತದೆ. ಆದರೆ ಎಲ್ಲಾ ಕಡೆ ಸೊಳ್ಳೆಗಳ ನಿಯಂತ್ರಣ ಆಗಬೇಕು, ಪರೀಕ್ಷೆಗಳು ಸರಿಯಾಗಿ ಆಗಬೇಕು, ಡೆಂಗ್ಯೂ ಪ್ರಕರಣಕ್ಕೆ ವಿಶೇಷ ಕೊಠಡಿಗಳನ್ನು ಸಿದ್ದಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

Advertisement

Tags :
Advertisement