Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಚಿವ ಹೆಚ್.ಕೆ.ಪಾಟೀಲ್ ವಿರುದ್ಧ ನೂರಾರು ಕೋಟಿಯ ಆರೋಪ..!

01:41 PM Mar 02, 2024 IST | suddionenews
Advertisement

 

Advertisement

ಗದಗ: ನಗರಸಭೆ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ವಿರುದ್ಧ ಆರೋಪ ಕೇಳಿ ಬಂದಿದೆ. ನೂರಾರು ಕೋಟಿ ಬೆಲೆ ಬಾಳುವ ನಗರಸಭೆಯ ಆಸ್ತಿಯನ್ನು ಪ್ರಾಧಿಕಾರ್ ಮೂಲಕ ಲೂಟಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ನಾಯಕರು ಈ ಆರೋಪ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Advertisement

ನಗರಸಭೆಯ ಬಿಜೆಪಿ ಸದಸ್ಯರು, ವಾಣಿಜ್ಯ, ಸಾಂಸ್ಕೃತಿಕ ವಸ್ತುಪ್ರದರ್ಶನ ಪ್ರಾಧಿಕಾರ ರಚನೆಗೂ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಾಧಿಕಾರದ ಮೂಲಕ ನಗರಸಭೆ ಆಸ್ತಿ ಕಬಳಿಕೆಗೆ ಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಇದೇ ವಿಚಾರಕ್ಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲೂ ಗೊಂದಲ ಉಂಟಾಗಿತ್ತು. ಮಾತಿನ ಚಕಮಕಿಯೂ ನಡೆದಿದೆ.

ನಾವೂ ಯಾವುದೇ ಕಾರಣಕ್ಕೂ ನಗರಸಭೆಯ ಆಸ್ತಿ ಕಬಳಿಕೆ ಮಾಡುವುದಕ್ಕೆ ಬಿಡುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಅವರು ಆಸ್ತಿ ಕಬಳಿಕೆಗೆ ನಿಂತಿದ್ದಾರೆ. ಕಾಂಗ್ರೆಸ್ ಸದಸ್ಯರು ಇದಕ್ಕೆ ಬೆಂಬಲ ನೀಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಅದಕ್ಕೆ ನಾವೂಗಳು ಅವಕಾಶ ಮಾಡಿಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಭೆಯ ನಡುವೆಯೇ ಗಲಾಟೆ ಜೋರಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಒಂದು ಸ್ವಲ್ಪ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ನೆರೆದಿದ್ದ ಸದಸ್ಯರೆಲ್ಲ ಸೇರಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ. ಸಚಿವ ಹೆಚ್ ಕೆ ಪಾಟೀಲ್ ಅವರು ಅಧಿಕಾರ ಬಳಕೆ ಮಾಡಿ, ಆಸ್ತಿ ಕಬಳಿಕೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

Advertisement
Tags :
accusation..!againstbengaluruchitradurgaGadaghundreds of croresMinister HK Patilsuddionesuddione newsಆರೋಪಚಿತ್ರದುರ್ಗನೂರಾರು ಕೋಟಿಬೆಂಗಳೂರುವಿರುದ್ಧಸಚಿವ ಹೆಚ್ ಕೆ ಪಾಟೀಲ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article