ಲೋಕಸಭೆಯಲ್ಲಿ ಸುಧಾಕರ್ ಗೆಲುವು ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ..!
ಚಿಕ್ಕಬಳ್ಳಾಪುರ: ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಸೋಲಿಸಿದ್ದರು. ಈ ಬಾರಿಯ ಲೋಕಸಭಾ ಚುನಾವೆಯಲ್ಲೂ ಸುಧಾಕರ್ ಯಾವುದೇ ಕಾರಣಕ್ಕೂ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ ಎಂದೇ ಪ್ರದೀಪ್ ಈಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದರು. ಅಷ್ಟೇ ಯಾಕೆ ಒಂದೇ ಒಂದು ಮತ ಜಾಸ್ತಿ ಬಂದರು ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಇದಿಒಗ ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕೆ.ಸುಧಾಕರ್ ಗೆಲುವು ಕಂಡಿದ್ದಾರೆ. ಈ ಮೂಲಕ ಪ್ರದೀಪ್ ಈಶ್ವರ್ ರಾಜೀನಾಮೆ ಕೊಡ್ತಾರಾ ಅಂತ ಸುಧಾಕರ್ ಬೆಂಬಲಿಗರು ಕಾಯುತ್ತಿದ್ದಾರೆ.
ಇದರ ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಮನೆಯ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಂದವಾರದಲ್ಲಿರುವ ಮನೆ ಮೇಲೆ ದಾಳಿ ನಡೆದಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಚೆಕ್ ಮಾಡಿದ್ದು, ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಂದಾನೂ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರದೀಪ್ ಈಶ್ವರ್ ತಮ್ಮ ಚೇತನ್, ಈ ಘಟನೆಯ ಹಿಂದೆ ಸುಧಾಕರ್ ಅವರ ಬೆಂಬಲಿಗರು ಇದ್ದಾರೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಮನೆಯ ಸಿಬ್ಬಂದಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಸುಮಾರು 10.15ರ ಸಮಯ ಅದು. ನಾಲ್ಕೈದು ಹುಡುಗರು ಕಲ್ಲು ಎಸೆದಿದ್ದಾರೆ. ಸಿಸಿಟಿವಿ ಸೆನ್ಸಾರ್ ಆನ್ ಆಗುತ್ತಿದ್ದಂತೆ ಓಡಿ ಹೋಗಿದ್ದಾರೆ. ಕಿಟಕಿ ಗಾಜು ಪುಡಿ ಪುಡಿಯಾಗಿದೆ. ಶಬ್ಧ ಕೇಳಿ ನಾವೂ ಕೂಡ ಹೊರಗೆ ಓಡಿ ಬಂದೆವು. ಅಷ್ಟರಲ್ಲಿ ಆ ಊಡುಗರು ಅಲ್ಲಿಂದ ಓಡಿ ಹೋಗಿದ್ದರು. ಈ ರೀತಿಯ ಘಟನೆ ಯಾವತ್ತು ಆಗಿರಲಿಲ್ಲ ಎಂದಿದ್ದಾರೆ.