Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದೇಶ ಒಡೆಯುವ ಕೆಲಸದ ಬಗ್ಗೆ ಯಾರೇ ಮಾತನಾಡಿದರು ಸಹಿಸಲ್ಲ : ಡಿಕೆ ಸುರೇಶ್ ಹೇಳಿಕೆಗೆ ಖರ್ಗೆ ಗರಂ

02:41 PM Feb 02, 2024 IST | suddionenews
Advertisement

 

Advertisement

 

ನವದೆಹಲಿ: ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ತ್ಯಾಗ ಬಲಿದಾನ ಮಾಡಿದ್ದಾರೆ. ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರು, ಅದನ್ನು ಸಹಿಸುವುದಿಲ್ಲ. ಅದು ಪಕ್ಷದವರೇ ಆಗಲಿ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಗ್ ಎಚ್ಚರಿಕೆ ನೀಡಿದ್ದಾರೆ. ದೇಶ ವಿಭಜನೆ ಮಾಡುವ ಹೇಳಿಕೆ ಯಾರೇ ನೀಡದರು ಸಹಿಸುವುದಿಲ್ಲ ಎಂದಿದ್ದಾರೆ.

Advertisement

ಸಂಸದ ಡಿಕೆ ಸುರೇಶ್ ಅವರು, ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಹೊಸತೇನು ಕೊಟ್ಟಿಲ್ಲ. ಕೇಂದ್ರ ಸರ್ಕಾರವೂ ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ನಾವೂ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ ಎಂದು ಹೇಳಿದ್ದರು.

ಈ ವಿಚಾರ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕದ ಬಿಜೆಪಿ ನಾಯಕರು ಡಿಕೆ ಸುರೇಶ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ‌. ದೇಶ ವಿಭಜನೆ ಬಗ್ಗೆ ಮಾತನಾಡಿ, ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಅನುದಾನ ನೀಡುತ್ತಿಲ್ಲ ಎಂಬ ಸುಳ್ಳು ಆರೋಪ ಮಾಡಿ, ದೇಶ ವುಭಜನೆ ಬಗ್ಗೆ ಮಾತನಾಡಿದ್ದಾರೆ. ದೇಶ ವಿಭಜನೆ ಮಾಡುವ ಕಾಂಗ್ರೆಸ್ ನ ಪ್ರಯತ್ನ ಇನ್ನೂ ಮುಂದುವರೆದಿದೆ. ಡಿಕೆ ಸುರೇಶ್ ಅವರ ಇದಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಕಾದ್ ಜೋಶಿ ಆಗ್ರಹ ಮಾಡಿದ್ದಾರೆ. ಬಿಜೆಪಿ ನಾಯಕರು ಈ ವಿಚಾರದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

Advertisement
Tags :
AICC President Mallikarjuna KhargebengaluruNewdelhisuddionesuddione newsಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಡಿಕೆ ಸುರೇಶ್ನವದೆಹಲಿಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article