ಅಪ್ಪು ಪಪ್ಪು ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನ
12:43 PM Apr 14, 2024 IST | suddionenews
Advertisement
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನರಾಗಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನ ಅವರ ನಿವಾಸದಲ್ಲಿಯೇ ನಿಧನರಾಗಿದ್ದಾರೆ. ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಅವರ ಕುಟುಂಬಸ್ಥರು ಹೃದಯಾಘಾತವಾಗಿದೆ ಎನ್ನುತ್ತಿದ್ದಾರೆ.
Advertisement
ಸದ್ಯ ಅವರ ಮೃತದೇಹವನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಇಡಲಾಗಿದೆ. ನಿರ್ಮಾಪಕ ಸೌಂದರ್ಯ ಜಗದೀಶ್ ಸ್ಯಾಂಡಲ್ ವುಡ್ ನಲ್ಲಿ ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.
ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಬಾಡಿ ಬಿಲ್ಡರ್ ಕೂಡ ಆಗಿದ್ದರು. ಆದರೆ ಇದೀಗ ಇದ್ದಕ್ಕಿದ್ದ ಹಾಗೇ ಸಾವನ್ನಪ್ಪಿರುವುದು ಎಲ್ಲರಿಗೂ ಶಾಕ್ ಆಗಿದೆ. ಸ್ಯಾಂಡಲ್ ವುಡ್ ಗಣ್ಯರು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
Advertisement