Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಎಲ್‌ಕೆ ಅಡ್ವಾಣಿ ಭಾಗಿ

10:24 PM Jan 12, 2024 IST | suddionenews
Advertisement

 

Advertisement

ಸುದ್ದಿಒನ್ : ರಾಮಜನ್ಮಭೂಮಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಈ ವಿಷಯವನ್ನು ತಿಳಿಸಿದ್ದಾರೆ. ಅಲೋಕ್ ಕುಮಾರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕೃಷ್ಣ ಗೋಪಾಲ್ ಅವರೊಂದಿಗೆ ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಅಡ್ವಾಣಿಯವರು ಈ ಕಾರ್ಯಕ್ರಮಕ್ಕೆ ಬರುವುದಾಗಿ ಹೇಳಿದ್ದಾರೆ. ಅಗತ್ಯ ಬಿದ್ದರೆ ಅವರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿಎಚ್ ಪಿ ಕಾರ್ಯಾಧ್ಯಕ್ಷ ಹೇಳಿದರು. ಆದರೆ, ಪಕ್ಷದ ಪ್ರಮುಖ ನಾಯಕ ಮುರಳಿ ಮನೋಹರ ಜೋಶಿ ಪಾಲ್ಗೊಳ್ಳುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಯತ್ನಿಸುವುದಾಗಿ ಜೋಶಿ ಹೇಳಿದ್ದಾರೆ. ಜೋಶಿ-ಅಡ್ವಾಣಿ ಅವರ ಆರೋಗ್ಯದ ದೃಷ್ಟಿಯಿಂದ ಅವರು ಕಾರ್ಯಕ್ರಮಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿರಲಿಲ್ಲ.

Advertisement

ಬಿಜೆಪಿ ಸಂಸ್ಥಾಪಕ ಸದಸ್ಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು 1980 - 90 ರ ದಶಕದ ಆರಂಭದಲ್ಲಿ ರಾಮಜನ್ಮಭೂಮಿ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆದರೆ, ಅಡ್ವಾಣಿ ಮತ್ತು ಜೋಶಿ ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ರಾಮಮಂದಿರ ಟ್ರಸ್ಟ್ ಕಳೆದ ತಿಂಗಳು ಹೇಳಿತ್ತು.

ಅಯೋಧ್ಯೆಯಲ್ಲಿ ಆಹ್ವಾನಿತರ ವಿವರವಾದ ಪಟ್ಟಿಯನ್ನು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರೊಂದಿಗೆ ಮಾತನಾಡಿದರು. “ಅವರ ವಯಸ್ಸನ್ನು ಪರಿಗಣಿಸಿ ಬರದಂತೆ ನಾವು ಅವರಿಗೆ ಮನವಿ ಮಾಡಿದ್ದೇವು.
ಇದಕ್ಕೆ ಇಬ್ಬರೂ ಒಪ್ಪಿದ್ದರು ಎಂದು ಚಂಪತ್ ರಾಯ್ ಹೇಳಿದರು. ರಾಯ್ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ವಿಎಚ್‌ಪಿ ಕಾರ್ಯಾಧ್ಯಕ್ಷ ಕುಮಾರ್ ಮರುದಿನ ಹೇಳಿಕೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅಡ್ವಾಣಿ ಮತ್ತು ಜೋಶಿ ಅವರಿಗೆ ಆಹ್ವಾನ ನೀಡಲಾಗಿದೆ. ಅಡ್ವಾಣಿ ಮತ್ತು ಜೋಶಿ ಇಬ್ಬರೂ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ಆಚರಣೆಯಲ್ಲಿ ಭಾಗವಹಿಸಲು ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಅವರು ಹೇಳಿದರು.

ಎಲ್ಲರನ್ನು ಆಹ್ವಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಂತೆ ನಾವು ವಿರೋಧ ಪಕ್ಷದ ನಾಯಕರಿಗೂ ಆಹ್ವಾನ ನೀಡಿದ್ದೇವೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ಇತರ ಎಲ್ಲ ಅಧ್ಯಕ್ಷರು ಪ್ರಾಣ ಪ್ರತಿಷ್ಠಾಪನೆಗೆ ಬರುವಂತೆ ಮನವಿ ಮಾಡಿದ್ದೇವೆ. ಈ ಸಂದರ್ಭವು ಎಲ್ಲಾ ಹಿಂದೂಗಳಿಗೆ ಹಬ್ಬ ಎಂದು ನಾವು ಭಾವಿಸುತ್ತೇವೆ ಎಂದರು.

ರಾಮಮಂದಿರದ ಪ್ರಾಣ ಪ್ರತಿಷ್ಠೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ ಎಂದು ಅಲೋಕ್ ಕುಮಾರ್ ಹೇಳಿದರು. ಅಡ್ವಾಣಿ ಅವರ ಅಯೋಧ್ಯೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ವಿಎಚ್‌ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.

ಜನವರಿ 15ರಿಂದ ಅಯೋಧ್ಯೆಯಲ್ಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ. ಜನವರಿ 22 ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ನಂತರ ರಾಮಮಂದಿರವನ್ನು ಭಕ್ತರಿಗಾಗಿ ತೆರೆಯಲಾಗುತ್ತದೆ.

Advertisement
Tags :
AyodhyainaugurationLK AdvaniparticipatedRam Mandirsuddioneಅಯೋಧ್ಯೆಉದ್ಘಾಟನಾ ಸಮಾರಂಭಎಲ್‌ಕೆ ಅಡ್ವಾಣಿಭಾಗಿರಾಮಮಂದಿರಸುದ್ದಿಒನ್
Advertisement
Next Article