ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯ ಫೋಟೋ ಬಿಡುಗಡೆ
ಸುದ್ದಿಒನ್ : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆ ನಡೆದಿದೆ. ರಾಮ್ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರೈ ಅವರು ಗರ್ಭಗುಡಿಯ ಫೋಟೋಗಳನ್ನು ಟ್ವಿಟರ್ (X) ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೊದಲ ಚಿತ್ರಗಳನ್ನು ಹಂಚಿಕೊಂಡ ಶ್ರೀ ರೈ ಅವರು ಹೀಗೆ ಬರೆದಿದ್ದಾರೆ: "ಭಗವಾನ್ ಶ್ರೀ ರಾಮಲಾಲಾ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ."
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋ ಗಳನ್ನು ಬಿಡುಗಡೆ ಮಾಡಿತು.
ಜನವರಿ 22ರಂದು ರಾಮ ಮಂದಿರದ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ. ಪ್ರಾಣಪ್ರತಿಷ್ಠ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ವ್ಯವಸ್ಥೆ ಮಾಡಲಾಗುತ್ತಿದೆ.
ದಶಕಗಳ ಸಮಸ್ಯೆ ಕೊನೆಗೊಂಡಿದ್ದು, ಅಯೋಧ್ಯೆಯಲ್ಲಿ ದಿವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆದಿದೆ. ಇದರೊಂದಿಗೆ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಯುಪಿ ಸರ್ಕಾರ ಭಾರೀ ಸಿದ್ಧತೆ ನಡೆಸುತ್ತಿದೆ.
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೇದ ಮಂತ್ರಗಳ ನಡುವೆ ಕಣ್ಣುಗಳ ಹಬ್ಬವಾಗಿರುವ ಭಗವಾನ್ ಶ್ರೀ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.
ಇದಲ್ಲದೆ, ಈ ಕಾರ್ಯಕ್ರಮಕ್ಕೆ ದೇಶದ 8 ಸಾವಿರ ಸೆಲೆಬ್ರಿಟಿಗಳನ್ನು ಸಹ ಆಹ್ವಾನಿಸಲಾಗಿದೆ.