Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ದ ಭಜರಂಗದಳ ಗರಂ : ಕಾರಣವೇನು ಗೊತ್ತಾ..?

09:07 PM Feb 21, 2024 IST | suddionenews
Advertisement

 

Advertisement

 

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಮಂಗಳೂರಿನ ಘಟನೆಯೊಂದರ ಬಗ್ಗೆ ಮಾತನಾಡಿದ್ದರು. ನಾನು ಗೃಹ ಸಚಿವನಾಗಿದ್ದಾಗ ಮಂಗಳೂರಿನ ಘಟನೆಯ ಸಂಧರ್ಭದಲ್ಲಿ ಎಷ್ಟೇ ಒತ್ತಡವಿದ್ದರು, ಮುಲಾಜಿಲ್ಲದೆ ಒದ್ದು ಒಳಗೆ ಹಾಕಿದ್ದೆ ಎಂಬುದಾಗಿ ಹೇಳಿದ್ದರು. ಈ ವಿಚಾರವಾಗಿ ಭಜರಂಗದಳ ಆಕ್ರೋಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಭಜರಂಗದಳದ ಸಹ ಸಂಯೋಜಕ ಪುನೀತ್ ಅತ್ತಾವರ್ ಆಕ್ರೋಶ ಹೊರ ಹಾಕಿದ್ದಾರೆ.

Advertisement

 

ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ. ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜೆಸ್ಟ್‌ಮೆಂಟ್ ಅಶೋಕ್ ಅವರೇ..! ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜೆಸ್ಟ್‌ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ.

 

ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ. ಪ್ರತಿಪಕ್ಷ ನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಪುನೀತ್ ಅತ್ತಾವರ ಕಿಡಿಕಾರಿದ್ದಾರೆ.

Advertisement
Tags :
Bajrang DalbengaluruchitradurgaOpposition Leader R Ashoksuddionesuddione newsಕಾಂಗ್ರೆಸ್ಕಾರಣಗರಂಚಿತ್ರದುರ್ಗಬಿಜೆಪಿಬೆಂಗಳೂರುಭಜರಂಗದಳವಿಪಕ್ಷ ನಾಯಕ ಆರ್ ಅಶೋಕ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article