For the best experience, open
https://m.suddione.com
on your mobile browser.
Advertisement

ಮಹಾದಾಯಿ ಯೋಜನೆಗೆ ಕಾಂಗ್ರೆಸ್ ನಿಂದಾನೇ ಹಿನ್ನಡೆ : ಬಸವರಾಜ್ ಬೊಮ್ಮಾಯಿ ಶಾಕಿಂಗ್ ಹೇಳಿಕೆ..!

06:15 PM Sep 08, 2024 IST | suddionenews
ಮಹಾದಾಯಿ ಯೋಜನೆಗೆ ಕಾಂಗ್ರೆಸ್ ನಿಂದಾನೇ ಹಿನ್ನಡೆ   ಬಸವರಾಜ್ ಬೊಮ್ಮಾಯಿ ಶಾಕಿಂಗ್ ಹೇಳಿಕೆ
Advertisement

Advertisement
Advertisement

ಹಾವೇರಿ: ಕಾಂಗ್ರೆಸ್ ಸರ್ಕಾರ ಸದ್ಯಕ್ಕೆ ಎತ್ತಿನಹೊಳೆ ಯೋಜನೆಯನ್ನು ಯಶಸ್ವಿಯಾಗಿ ಚಾಲನೆ ನೀಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಮಹಾದಾಯಿ ಯೋಜನೆ ಬಗ್ಗೆ ಬಿಜೆಪಿಗೆ ಸವಾಲು ಹಾಕಿದ್ದರು. ಇದೀಗ ಮಹಾದಾಯಿ ಯೋಜನೆಯ ಬಗ್ಗೆ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದ್ದು, ಕಾಂಗ್ರೆಸ್ ನಿಂದಾನೇ ಹಿನ್ನಡೆ ಎಂದಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಕರ್ನಾಟಕಕ್ಕೆ ಮಹಾದಾಯಿಯ ಒಂದು ಹನಿ ನೀರನ್ನು ಕೊಡುವುದಿಲ್ಲ ಎಂದು 2009ರಲ್ಲಿ ಸೋನಿಯಾ ಗಾಂಧಿ ಅವರೇ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದೇ ಹೋದರು ಟ್ರಿಬ್ಯುನಲ್ ಮಾಡಿದ್ದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡ ನೀಡಿರಲಿಲ್ಲ. ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು. ಈಗ ವನ್ಯ ಜೀವಿ ಮಂಡಳಿಯ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.

Advertisement
Advertisement

ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ 40% ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ,ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ. ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ ವಿರುದ್ದ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು. ಇನ್ನು ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.

Advertisement
Tags :
Advertisement