Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿದ್ದರಾಮಯ್ಯ

09:14 PM Dec 21, 2024 IST | suddionenews
Advertisement

ಬೆಂಗಳೂರು, ಡಿ.21: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

Advertisement

ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ದತೆಗಳ ಪರಿಶೀಲನೆ ನಡೆಸಿದರು.

ಬೆಳಗಾವಿಯಲ್ಲಿ ಎರಡು ದಿನಗಳ ಕಾರ್ಯಕ್ರಮಗಳ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, 27ರಂದು ಸಾರ್ವಜನಿಕ ಸಮಾರಂಭ ನಡೆಯಲಿದೆ.

Advertisement

ಶತಮಾನೋತ್ಸವ ಸಮಾರಂಭಕ್ಕೆ ರಾಷ್ಟ್ರದೆಲ್ಲೆಡೆಯಿಂದ ಆಗಮಿಸಲಿರುವ ಸಂಸದರು, ಗಣ್ಯರಿಗೆ ವಸತಿ, ಊಟೋಪಚಾರ ಸೇರಿದಂತೆ ಸೂಕ್ತ ಆತಿಥ್ಯ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಸಮಿತಿಗಳಿಗೆ ಸೂಚಿಸಲಾಯಿತು.

ಡಿಸೆಂಬರ್ 27ರಂದು ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ನೆರವೇರಿಸುವ ಕುರಿತು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ನಿರ್ಧರಿಸಲಾಯಿತು

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡನ್ನು ಪ್ರಥಮ ಬಾರಿಗೆ ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು. ಈಗ ಅದಕ್ಕೂ ನೂರು ವರ್ಷಗಳು ಸಂದ ಹಿನ್ನೆಲೆಯಲ್ಲಿ ಆ ಹಾಡನ್ನು ಪುನಃ ಶತಮಾನೋತ್ಸವ ಆಚರಣೆ ಯಲ್ಲಿ ಹಾಡಿಸುವ ಕುರಿತು ತೀರ್ಮಾನಿಸಲಾಯಿತು.

ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಏಕೀಕರಣದ ಮೊದಲ ಧ್ವನಿ ಬಲವಾಗಿ ಪ್ರತಿಪಾದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕನ್ನಡಿಗರ ಪಾಲಿಗೂ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಚಿವರಾದ ಪರಮೇಶ್ವರ್, ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಬೋಸರಾಜು, ಡಾ. ಎಂ ಸಿ ಸುಧಾಕರ್, ರಹೀಂಖಾನ್‌, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಮಧು ಬಂಗಾರಪ್ಪ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement
Tags :
belagavibengaluruChief Minister SiddaramaiahchitradurgaCongress session centenarykannadaKannadaNewssuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವಚಿತ್ರದುರ್ಗಬೆಂಗಳೂರುಬೆಳಗಾವಿಮುಖ್ಯಮಂತ್ರಿ  ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article