Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕಾಂಗ್ರೆಸ್ ತೆಕ್ಕೆಗೆ ಬಳ್ಳಾರಿ ಮಹಾನಗರ ಪಾಲಿಕೆ..!

05:34 PM Jun 21, 2024 IST | suddionenews
Advertisement

ಬಳ್ಳಾರಿ: ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, 23ನೇ ಮೇಯರ್ ಆಗಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಲ್ಲಂಗಿ ನಂದೀಶ್ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮುಲ್ಲಂಗಿ ನಂದೀಶ್ ಸಚಿವ ಬಿ.ನಾಗೇಂದ್ರ ಅವರುಗೆ ಆಪ್ತರಾಗಿದ್ದರು. ಜೊತೆಗೆ 18ನೇ ವಾರ್ಡಿನ ಸದಸ್ಯರಾಗಿದ್ದರು. ಸದ್ಯ 23ನೇ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

Advertisement

 

ಬಿಜೆಪಿಯಿಂದ ಶ್ರೀನಿವಾಸ್ ಮೋತ್ಕರ್ ಸ್ಪರ್ಧೆಯಲ್ಲಿದ್ದರು. ಆದರೆ 21 ಸ್ಥಾನ ಗೆದ್ದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಸಚಿವ ಬಿ.ನಾಗೇಂದ್ರ ಅವರು ಮೇಲುಗೈ ಸಾಧಿಸಿದ್ದಾರೆ. ಉಪಮೇಯರ್ ಆಗಿ ಡಿ.ಸುಕುಂ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಡಿ.ಸುಕಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಪಾಲಿಕೆಯಲ್ಲಿ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿತ್ತು. ಒಟ್ಟು 39 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 21 ಸ್ಥಾನ ಗೆದ್ದಿತ್ತು. ಇದರ ಜೊತೆಗೆ ಪಕ್ಷೇತರರಾಗಿ ಗೆದ್ದಿದ್ದ ಐವರು ಸದಸ್ಯರು ಚುನಾವಣೆ ನಂತರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪಾಲಿಕೆಯಲ್ಲಿ ಕಾಂಗ್ರೆಸ್ 26 ಸ್ಥಾನಗಳನ್ನು ಹೊಂದಿದಂತೆ ಆಗಿದೆ.

.ಮೇಯರ್ ಸ್ಥಾನವನ್ನು ತಮ್ಮ ಬೆಂಬಲಿಗರಿಗೆ ನೀಡಬೇಕೆಂದು ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಭರತ್ ರೆಡ್ಡಿ ನಡುವೆ ಪೈಪೋಟಿ ನಡೆದಿತ್ತು. ಬಳಿಕ ಹೈಕಮಾಂಡ್ ಮಧ್ಯಸ್ಥಿಕೆಯಿಂದಾಗಿ ನಂದೀಶ್ ಅವರಿಗೆ ಟಿಕೆಟ್ ಸಿಕ್ಕಿದೆ. ಬಿ.ನಾಗೇಂದ್ರ ಅವರ ಆಪ್ತರಿಗೆ ಟಿಕೆಟ್ ಕೊಡಿಸಿದ್ದು ಅಲ್ಲದೆ, ಅವರೇ ಗೆಲ್ಲುವಂತೆ ನೋಡಿಕೊಂಡಿದ್ದಾರೆ. ಇನ್ನು ಕಾಂಗ್ರೆಸ್ ಬಹುಮತ ಹೊಂದಿದ್ದ ಕಾರಣ ನಾಲ್ವರು ಮೇಯರ್ ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಎಲ್ಲರೂ ಯೋಚಿಸಿ, ಮುಲ್ಲಂಗಿ‌ನಂದೀಶ್ ಅವರನ್ನೇ ಮೇಯರ್ ಆಗಿ ಆಯ್ಕೆ ಮಾಡಿದ್ದಾರೆ.

Advertisement
Tags :
ballariBellary Metropolitan CorporationCongressಕಾಂಗ್ರೆಸ್ಬಳ್ಳಾರಿ ಮಹಾನಗರ ಪಾಲಿಕೆ
Advertisement
Next Article