ನಿರ್ಮಲಾ ಸೀತರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರು ಕೋರ್ಟ್ ಆದೇಶ : ಕಾರಣವೇನು ಗೊತ್ತಾ..?
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ನಿರ್ಮಲಾ ಸೀತರಾಮನ್ ವಿರುದ್ಧ ದೂರು ಸಲ್ಲಿಕೆಯಾದ ಹಿನ್ನೆಲೆ ಎಫ್ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿರುವ ಆರೋಪ ನಿರ್ಮಲಾ ಸೀತರಾಮನ್ ಮೇಲಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಬೆಂಗಳೂರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ಬಳಿಕ ಹಣಕಾಸು ಸಚುವೆ ನಿರ್ಮಲಾ ಸೀತರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆ. ದೂರುದಾರ ಆದರ್ಶ್ ಅಯ್ಯರ್ ಅವರು ಬೆದರಿಕೆ ಮತ್ತು ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಲಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಆರೋಪಿಸಿದ್ದಾರೆ.
ಈ ಸಂಬಂಧ ನಿರ್ಮಲಾ ಸೀತರಾಮನ್, ಜೆಒಇ ನಡ್ಡಾ, ನಳೀನ್ ಕುಮಾರ್ ಕಟೀಲ್, ಬಿವೈ ವಿಜಯೇಂದ್ರ ಮೇಲೆ ಜನಾಧಿಕಾರ ಸಂಘರ್ಷ ಪರಿಷತ್ ಕಳೆದ ವರ್ಷವೇ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ದೂರಿನ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಠಾಣೆಗೆ ಸೂಚನೆ ನೀಡಿದೆ. ಅರ್ಜಿದಾರರ ಪರ ವಕೀಲರಾದ ಬಾಲನ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ. ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡುವುದು ಕೇಂದ್ರ ಸಚಿವರಿಗೂ ಸಂಕಷ್ಟ ಎದುರಾಗಿದೆ.