Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಿಟಿ ರವಿಯವರಿಗೆ ಬಿಗ್ ರಿಲೀಫ್ : ಬಿಡುಗಡೆಗೆ ಹೈಕೋರ್ಟ್ ಆದೇಶ

06:19 PM Dec 20, 2024 IST | suddionenews
Advertisement

 

Advertisement

ಬೆಂಗಳೂರು, ಡಿಸೆಂಬರ್ 20 : ಬೆಳಗಾವಿ ಅಧಿವೇಶನದಲ್ಲಿ  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾದ ಹೇಳಿಕೆ ನೀಡಿದ ವಿಚಾರವಾಗಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಸಿಟಿ ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಕ್ಷಣ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ. ಮುಂದೆ ನಡೆಯುವ ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿದೆ.

Advertisement

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನಿಗಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನಾಳೆಗೆ(ಡಿಸೆಂಬರ್ 21) ಜಾಮೀನು ಮುಂಡೂಡಿತ್ತು. ಆದರೆ ಇಂದು ಹೈಕೋರ್ಟ್​ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಸಿಟಿ ರವಿಯವರಿಗೆ ಈ ಆದೇಶದಿಂದ ಬಿಗ್ ರಿಲೀಫ್ ಸಿಕ್ಕಿದೆ.

Advertisement
Tags :
bengaluruBIG reliefchitradurgact raviHigh courtkannadaKannadaNewsordersreleasesuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಬಿಗ್ ರಿಲೀಫ್ಬಿಡುಗಡೆಬೆಂಗಳೂರುಸಿಟಿ ರವಿಸುದ್ದಿಒನ್ಸುದ್ದಿಒನ್ ನ್ಯೂಸ್ಹೈಕೋರ್ಟ್
Advertisement
Next Article