Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

05:09 PM Apr 26, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ ಶುಕ್ರವಾರ ನಗರದ ಉಚ್ಚಂಗಿಯಲ್ಲಮ್ಮ ದೇವಸ್ಥಾನ, ಧರ್ಮಶಾಲಾ ರಸ್ತೆಯಲ್ಲಿರುವ ಸೀತಾರಾಮ ದೇವಸ್ಥಾನ, ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

Advertisement

ಮೂರು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಗೋವಿಂದ ಕಾರಜೋಳ ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಈ ಚುನಾವಣೆ ಅತ್ಯಂತ ಮಹತ್ವದ್ದು, ಭಾರತವನ್ನು ವಿಶ್ವಗುರುವನ್ನಾಗಿಸುವಲ್ಲಿ ಶ್ರಮಿಸುತ್ತಿದ್ದಾರೆ.

ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಭಾರತ ಐದನೆ ಸ್ಥಾನದಲ್ಲಿದ್ದು, ಇನ್ನು ಮೂರು ವರ್ಷಗಳಲ್ಲಿ ಮೂರನೆ ಸ್ಥಾನಕ್ಕೆ ಬರುವುದರಲ್ಲಿ ಸಂಶಯವಿಲ್ಲ. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ರಾಜ್ಯದ ಜನರ ಮತ ಸೆಳೆಯುವ ಕುತಂತ್ರ ನಡೆಸುತ್ತಿದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಇನ್ನು 25 ಭಾಗ್ಯಗಳನ್ನು ಕೊಡುವುದಾಗಿ ಮತದಾರರಿಗೆ ಆಸೆ ಹುಟ್ಟಿಸುತ್ತಿದೆ. ಪ್ರತಿ ವರ್ಷ ಒಬ್ಬ ಮಹಿಳೆಗೆ ಒಂದು ಲಕ್ಷ ರೂ.ಗಳನ್ನು ನೀಡುವುದಾಗಿ ಮರಳು ಮಾಡುತ್ತಿರುವ ಕಾಂಗ್ರೆಸ್ ಹಣ ಎಲ್ಲಿಂದ ತರುತ್ತದೆ. ಒಟ್ಟು ಐವತ್ತು ಲಕ್ಷ ಕೋಟಿ ರೂ.ಗಳಾಗುತ್ತದೆ. ನಮ್ಮ ದೇಶದ ಬಜೆಟ್ಟೆ ಅಷ್ಟೊಂದಿಲ್ಲ. ಆದ್ದರಿಂದ ಮತದಾರರು ಯೋಚಿಸಿ ಮತ ನೀಡಿ ಎಂದು ಮನವಿ ಮಾಡಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್, ವಕ್ತಾರ ನಾಗರಾಜ್‍ಬೇದ್ರೆ, ಕಾರ್ಯದರ್ಶಿ ಶಂಭು ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

ಚಿತ್ರದುರ್ಗ : ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಸರ್ಕಾರಿ ಉರ್ದು ಶಾಲೆಯ ಮತಗಟ್ಟೆ 122 ರಲ್ಲಿ ಮತ ಚಲಾಯಿಸಿದ ನವ ಮತದಾರರ ಜೊತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪುತ್ರ ಬಿಜೆಪಿ. ಎಸ್ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್‍ಕಾರಜೋಳ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದರು.

ಚಿತ್ರದುರ್ಗ : ಹೊಸದುರ್ಗ ತಾಲ್ಲೂಕು ದೇವಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಖಿ ಮತಗಟ್ಟೆ 38 ರಲ್ಲಿ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಲೋಕಸಭೆ ಚುನಾವಣೆಯಲ್ಲಿ ಶುಕ್ರವಾರ ಮತದಾನ ಮಾಡಿ ಶಾಹಿ ಬೆರಳನ್ನು ತೋರಿಸಿ ಖುಷಿ ಪಡುತ್ತಿರುವುದು.

ಚಿತ್ರದುರ್ಗ : ಶುಕ್ರವಾರ ನಡೆದ ಲೋಕಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಪಟ್ಟದ ಪರಮೇಶ್ವರಿ ಶಾಲೆಯಲ್ಲಿ ಮತ ಚಲಾಯಿಸಿದರು.

Advertisement
Tags :
bengalurubjp candidatechitradurgagovind karjolGovinda Karajolasuddionesuddione newsvotingಗೋವಿಂದ ಕಾರಜೋಳಚಿತ್ರದುರ್ಗದೇವಸ್ಥಾನಗಳಲ್ಲಿ ಪೂಜೆಬಿಜೆಪಿ ಅಭ್ಯರ್ಥಿಬೆಂಗಳೂರುಮತದಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article