Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

06:40 PM Sep 16, 2024 IST | suddionenews
Advertisement

 

Advertisement

ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ವಿರುದ್ಧ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರನನ್ನು ನಾನೆಂದು ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಿದೆ‌. ವಿಜಯೇಂದ್ರ ಪಕ್ಷದಲ್ಲಿ ಇನ್ನೂ ಜೂನಿಯರ್. ಅವನಿಗೆ ಏನು ಐಡಿಯಾಲಜಿ ಇಲ್ಲ. ಅವನು ಅಧ್ಯಕ್ಷನಾಗಿದ್ದಕ್ಕೆ ನನ್ನ ವಿರೋಧವಿದೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪನವರ ಬಗ್ಗೆ ಬಹಳ ಗೌರವವಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಸಲಹೆ ಬೇಕಾದರೆ ಯಡಿಯೂರಪ್ಪ ಅವರ ಮನೆಗೆ ಹೋಗುತ್ತೇವೆ ಎಂದಿದ್ದಾರೆ.

Advertisement

ಇದೆ ವೇಳೆ ಮುನಿರತ್ನ ಬಂಧನದ ಬಗ್ಗೆ ಮಾತನಾಡಿ, ಮುನಿರತ್ನ ಅವರು ಬೈದಿರುವುದು ಸಾಬೀತೆ ಆಗಿಲ್ಲ. ಆಗಲೇ ನಮ್ಮ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಫ್ಎಸ್ಎಲ್ ವರದಿ ಬರುವವರೆಗೂ ನಮ್ಮವರು ಮಾತನಾಡಬಾರದು. ಮುನಿರತ್ನ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರೇ ಒತ್ತಡ ಹಾಕುತ್ತಿದ್ದಾರೆ. ಹಿಂದೆ ಮುಂದೆ ನೋಡದೆ ಈ ರೀತಿ ಮಾತನಾಡುವುದು ಸರಿಯಲ್ಲ. ಮುನಿರತ್ನ ಬೈದಿರುವುದು ದೃಢವಾಗಿಲ್ಲ. ಅವರ ಬೈಗುಳ ಕಟ್ ಅಂಡ್ ಪೇಸ್ಟ್ ಇರಬಹುದು. ಮುನಿರತ್ನ ವಿಚಾರದಲ್ಲಿ ನಮ್ಮವರು ದುಡಿಕಿನ ನಿರ್ಧಾರ ಮಾಡುತ್ತಿದ್ದಾರೆ. ಅವರ ವಿರುದ್ದ ವರಿಷ್ಠರು ನೋಟೀಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Tags :
B. Y. VijayendrabengaluruBjpchitradurgaramesh jarakiholisuddionesuddione newsಚಿತ್ರದುರ್ಗಬಿಜೆಪಿಬೆಂಗಳೂರುಭ್ರಷ್ಟರಮೇಶ್ ಜಾರಕಿಹೊಳಿರಾಜ್ಯಾಧ್ಯಕ್ಷರುಲೇಬಲ್ವಿಜಯೇಂದ್ರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article