For the best experience, open
https://m.suddione.com
on your mobile browser.
Advertisement

ಉತ್ತರಾಖಂಡದಲ್ಲಿ ಕಣಿವೆಗೆ ಬಿದ್ದ ಬಸ್ : 36 ಮಂದಿ ಮೃತ

07:22 PM Nov 04, 2024 IST | suddionenews
ಉತ್ತರಾಖಂಡದಲ್ಲಿ ಕಣಿವೆಗೆ ಬಿದ್ದ ಬಸ್   36 ಮಂದಿ ಮೃತ
Advertisement

ಸುದ್ದಿಒನ್ | ಉತ್ತರಾಖಂಡದ ದೇವಭೂಮಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಎಂಬಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಕುಪಿ ಪ್ರದೇಶದಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ.

Advertisement

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಓವರ್‌ಲೋಡ್‌ನಿಂದ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಘಟನೆ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದು, ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಶೀಘ್ರ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಏರ್ ಲಿಫ್ಟ್ ಮಾಡಲು ಸೂಚಿಸಲಾಗಿದೆ. ಸಂತ್ರಸ್ತರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಹಾಗೂ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.4 ಲಕ್ಷ ಹಾಗೂ ಗಾಯಗೊಂಡವರಿಗೆ ರೂ.1 ಲಕ್ಷ ಆರ್ಥಿಕ ನೆರವು ಘೋಷಿಸಲಾಯಿತು. ಘಟನೆಯ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶಿಸಿದ್ದಾರೆ. ಸಂತ್ರಸ್ತರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಧಾಮಿ ತಿಳಿಸಿದ್ದಾರೆ. ಅಲ್ಲದೆ, ಸದ್ಯ ರಾಮನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಸಿಎಂ ಭೇಟಿ ಮಾಡಲಿದ್ದಾರೆ. ಆದರೆ, ಅಪಘಾತದ ವೇಳೆ ಬಸ್‌ನಲ್ಲಿ 40 ಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ. ಬಸ್ಸಿನಲ್ಲಿ ಸಾಮರ್ಥ್ಯ ಮೀರಿ ಪ್ರಯಾಣಿಕರನ್ನು ಹೊತ್ತೊಯ್ಯಲಾಗುತ್ತಿತ್ತು. ಗುಡ್ಡಗಾಡು ಪ್ರದೇಶವಾದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಮೂಲತಃ ದೃಢಪಟ್ಟಿದೆ.

Advertisement

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆದರೆ, ಅವರ ವಿವರಗಳು ಇನ್ನೂ ತಿಳಿದುಬಂದಿಲ್ಲ. ಇವರೆಲ್ಲರೂ ಸಮೀಪದ ಪ್ರದೇಶಗಳಿಗೆ ಸೇರಿದವರು ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ಈ ಅವಘಡದಿಂದ ಆ ಭಾಗದಲ್ಲಿ ಸಂತ್ರಸ್ತರ ರೋದನ ಮುಗಿಲು ಮುಟ್ಟಿದೆ.

Advertisement

Advertisement
Tags :
Advertisement