ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?
ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ ವಿಸ್ತರಣೆಯ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ನಾಳೆ ಉಪಚುನಾವಣೆಯ ಫಲಿತಾಂಶ ಹೊರಬರಲಿದೆ. ಫಲಿತಾಂಶ ಬಂದ ಮೇಲೆ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೇ ಪ್ರಶ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಎದುರಾಗಿತ್ತು.
ಈ ಬಗ್ಗೆ ಮುರುಡೇಶ್ವರದಲ್ಲಿ ಮಾತನಾಡಿದ ಅವರು, ಸಂಪುಟದ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಲೇ ಇರುತ್ತವೆ. ನಾನು ಮುಖ್ಯಮಂತ್ರಿ ಅಲ್ಲ. ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿ. ಅವರು ಇದಕ್ಕೆಲ್ಲ ಉತ್ತರ ಹೇಳುತ್ತಾರೆ ಎಂದಿದ್ದಾರೆ.
ಇದೇ ವೇಳೆ ಎಕ್ಸಿಟ್ ಪೋಲ್ ಬಗ್ಗೆ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕೇವಲ ಹದಿನಾರು ಸಾವಿರ ಮತಗಳು ಮಾತ್ರ ದೊರೆತಿದ್ದವು. ಆದರೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸ ನನ್ನಲ್ಲಿದೆ. ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆ. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಹೀಗಾಗಿ ಈ ಬಾರಿಯ ಗೆಲುವು ನಮ್ಮದೆ ಎಂದು ಹೇಳಿದ್ದಾರೆ.
ಹಾಗೇ ಚುನಾವಣೆಯ ಎಕ್ಸಿಟ್ ಪೋಲ್ ಬಗ್ಗೆ ಮಾತನಾಡಿ, ನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸರಳ ಬಹುಮತ ಪಡೆದು ಸರ್ಕಾರ ಸಂಘಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದಿದ್ದಾರೆ.