ಜೂನ್. 03ಕ್ಕೆ ಶಿಕ್ಷಕರಿಗೆ ಸಾಂದರ್ಭಿಕ ರಜೆ...!
ಲೋಕಸಭಾ ಚುನಾವಣೆಯ ಬೆನ್ನಲ್ಲೇ ಈಗ ಪದವೀಧರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ನಡೆದಿದೆ. ಜೂನ್ 3 ರಂದು ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಅದಕ್ಕೆಂದೆ ಶಿಕ್ಷಕರಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಅರ್ಹ ಮತದಾರರಿಗೆ ಅನ್ವಯವಾಗುವಂತೆ ಈ ರಜೆಯನ್ನು ಘೋಷಣೆ ಮಾಡಲಾಗಿದೆ. ಯಾವೆಲ್ಲಾ ಜಿಲ್ಲೆಯಲ್ಲಿ ಚುನಾವಣೆ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ. ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ (ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಒಳಗೊಂಡಂತೆ)
* ಕರ್ನಾಟಕ ನೈಋತ್ಯ ಪದವೀಧರ ಕ್ಷೆತ್ರ. ಶಿವಮೊಗ್ಗ (ದಾವಣಗೆರೆ ಜಿಲ್ಲೆಯ ಚನ್ನಗಿರಿ & ಹೊನ್ನಾಳಿ ತಾಲೂಕು ಒಳಗೊಂಡಂತೆ), ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು.
* ಬೆಂಗಳೂರು ಪದವೀಧರ ಕ್ಷೇತ್ರ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ.
* ಆಗ್ನೇಯ ಶಿಕ್ಷಕರ ಕ್ಷೇತ್ರ. ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ & ಹರಪನಹಳ್ಳಿ ತಾಲೂಕುಗಳನ್ನು ಹೊರತುಪಡಿಸಿ), ತುಮಕೂರು, ಕೋಲಾರ.
* ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರ. ಶಿವಮೊಗ್ಗ (ದಾವಣಗೆರೆ ಜಿಲ್ಲೆಯ ಚನ್ನಗಿರಿ & ಹೊನ್ನಾಳಿ ತಾಲೂಕು ಒಳಗೊಂಡಂತೆ), ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
* ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ದಲ್ಲಿ ಚುನಾವಣೆ ನಡೆಯಲಿದೆ.
ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ Establishmentಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.