ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ : 23 ಜನ ಅರೆಸ್ಟ್..!
ದಾವಣಗೆರೆ: ಚನ್ನಗಿರಿಯ ಟಿಪ್ಪು ನಗರದ ಆದಿಲ್ ಎಂಬಾತನ ಲಾಕಪ್ ಡೆತ್ ಆರೋಪದ ಪ್ರಕರಣದಲ್ಲಿ ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 23 ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಚನ್ನಗಿರಿ ಟೌನ್ ನಿವಾಸಿಗಳೆಂದು ತಿಳಿದು ಬಂದಿದೆ. ಬಂಧಿತ 23 ಆರೋಪಿಗಳಿಗೆ ಚನ್ನಗಿರಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಯುವಕನ ಲಾಕಪ್ ಡೆತ್ ಆರೋಪದಿಂದ ರೊಚ್ಚಿಗೆದ್ದ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಪೊಲೀಸ್ ಠಾಣೆಗೆ ಕಲ್ಲು ತೂರಾಟ ನಡೆಸಿದ್ದರು. ಸದ್ಯಕ್ಕೆ ಚನ್ನಗಿರಿ ಪಟ್ಟಣ ಸಹಜ ಸ್ಥಿತಿಯತ್ತ ಮರಳುತ್ತಿದ್ದರು, ಕಲ್ಲು ತೂರಾಟ ನಡೆದ ಆಯಾಕಟ್ಟಿನ ಪ್ರದೇಶದಲ್ಲಿ ಇನ್ನು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದಿಲ್ ಶವ ಪರೀಕ್ಷೆಗೆ ಆಸ್ಒತ್ರೆಗೆ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ.
32 ವರ್ಷದ ಆದಿಲ್ ನನ್ನು ಓಸಿ ಕೇಸಿನಲ್ಲಿ ಅರೆಸ್ಟ್ ಮಾಡಲಾಗಿತ್ತು. ಪೊಲೀಸರ ವಶದಲ್ಲಿದ್ದಾಗಲೇ ಆದಿಲ್ ಸಾವನ್ನಪ್ಪಿದ್ದಾನೆ. ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಿ ಚನ್ನಗಿರಿ ಪೊಲೀಸ್ ಠಾಣೆಗೆ ಜನರು ಮುತ್ತುಗೆ ಹಾಕಿದ್ದರು. ಠಾಣೆ ಮುಂದೆ ಆದಿಲ್ ಮೃತದೇಹ ಇಟ್ಟುಕೊಂಎಉ ಸಾವಿರಾರು ಜನ ಪ್ರತಿಭಟನೆ ಕೂಡ ಮಾಡಿದ್ದರು. ಪ್ರತಿಭಟನಾಕಾರರು ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿದ್ದಲ್ಲದೆ ದಾವಣಗೆರೆ ಎಸ್ಪಿ ಕಾರಿನ ಮೇಲೆ ಕಲ್ಲು ತೂರಾಟ ಕೂಡ ನಡೆಸಿದರು. ಈ ವೇಳೆ ಹಲವು ಪೊಲೀಸರಿಗೂ ಗಾಯವಾಗಿದೆ. ಆದಿಲ್ ನನ್ನು ಅರೆಸ್ಟ್ ಮಾಡಿದಾಗ ಪೊಲೀಸ್ ಠಾಣೆಯಲ್ಲಿ ಕೇವಲ ಏಳು ನಿಮಿಷಗಳ ಕಾಲ ಮಾತ್ರ ಇದ್ದದ್ದು. ಈ ವೇಳೆ ಆದಿಲ್ ಗೆ ರಕ್ತದೊತ್ತಡ, ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ ವೈದ್ಯರು ಪ್ರಾಥಮಿಕ ವರದಿ ನೀಡಿದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ.