Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು : ಮುಖ್ಯಮಂತ್ರಿ ಸಿದ್ದರಾಮಯ್ಯ

02:13 PM Oct 24, 2024 IST | suddionenews
Advertisement

 

Advertisement

ಚನ್ನಪಟ್ಟಣ, ಅಕ್ಟೋಬರ್ 24: ಜನರು ಸಿ.ಪಿ.ಯೋಗೇಶ್ವರ ನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್ ರವರ ಕಚೇರಿಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

Advertisement

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್ ಡಿ ಎ ನಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರ್ ನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕೂಡ, ಕಾಂಗ್ರೆಸ್ ನ ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದರು.

Advertisement
Tags :
bengaluruchannapatnaChief Minister Siddaramaiahchitradurgacongress candidatesuddionesuddione newsಕಾಂಗ್ರೆಸ್ ಅಭ್ಯರ್ಥಿಗೆಲುವುಚನ್ನಪಟ್ಟಣಚಿತ್ರದುರ್ಗಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article