Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮಕ್ಕಳು ದೈನಂದಿನ ಚಟುವಟಿಕೆಗಳಲ್ಲಿ ನಿತ್ಯವೂ ಯೋಗಾಸನವನ್ನು ಅಳವಡಿಸಿಕೊಳ್ಳಬೇಕು : ಎಸ್. ನಾಗಭೂಷಣ್

05:11 PM Jan 10, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ. 10 : ಕನ್ನಡ ಗೀತೆಗಳೊಂದಿಗೆ ಯೋಗಾಸನ ಮಾಡಿದರೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮನಸ್ಸು ಏಕಾಗ್ರತೆಯ ಕೇಂದ್ರೀಕರಣದಿಂದ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಕ್ಕಳು ದೈನಂದಿನ ಚಟುವಟಿಕೆಗಳಲ್ಲಿ ನಿತ್ಯವೂ ಯೋಗಾಸನವನ್ನು ಅಳವಡಿಸಿಕೊಳ್ಳಬೇಕು ಎಂದು ಶಾಲಾಶಿಕ್ಷಣ ಇಲಾಖೆ ಕ್ಷೇತ್ರಶಿಕ್ಷಣಾಧಿಕಾರಿ ಎಸ್. ನಾಗಭೂಷಣ್ ಹೇಳಿದರು.

Advertisement

ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ವಿವೇಕಾನಂದನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ಕನ್ನಡಗೀತೆಗಳೊಂದಿಗೆ ಯೋಗ ತರಬೇತಿ ಕಾರ್ಯಾಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಪ್ರತಿವರ್ಷ ನಿಗಧಿಪಡಿಸುತ್ತಿರುವ ಕನ್ನಡ ಗೀತೆಗಳನ್ನು ಪ್ರತಿಯೊಂದೂ ಶಾಲಾಕಾಲೇಜುಗಳಲ್ಲಿ ಪರಿಚಯಿಸಬೇಕು. ಪುಸ್ತಕಗಳಲ್ಲಿ ಬರುವ ಪ್ರತೀ ಅಧ್ಯಾಯಗಳ ವಿಷಯಗಳನ್ನು ಗೀತೆಗಳ ರೂಪದಲ್ಲಿ ಪರಿಚಯಿಸಿದರೆ ಸಾಂಸ್ಕøತಿಕ ವಾತಾವರಣ ಮುದನೀಡುತ್ತದೆ ಮತ್ತು ಬೇಗ ಮನದಟ್ಟಾಗುತ್ತದೆ. ಮನರಂಜನೆ ಜೊತೆಗೆ ಪಾಠ ಓದಿದ ಅನುಭವವಾಗುತ್ತದೆ. ಸಂಗೀತ, ನೃತ್ಯ, ನಾಟಕಗಳಿಂದ ಕೂಡಿದ ಬೋಧನೆ ಮಕ್ಕಳಿಗೆ ಪರಿಣಾಮಕಾರಿಯಾಗುತ್ತದೆ ಎಂದರು.

Advertisement

ಸ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ಟಿ.ಷಣ್ಮುಖಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಂಸ್ಕøತಿಕ ಮಾಧ್ಯಮಗಳು ಬಡವ ಬಲ್ಲಿದರೆಂಬ ಭೇದ ತೋರದೆ ಎಲ್ಲಾ ವರ್ಗದವರನ್ನು ಒಟ್ಟುಮಾಡುವ ಶಕ್ತಿಯನ್ನು ತುಂಬಿವೆ. ಇಂತಹ ಅಪರೂಪದ ಕಾರ್ಯಕ್ರಮಗಳನ್ನು ಸರ್ಕಾರಿ ಶಾಲೆಗಳಲ್ಲಿ ಹಮ್ಮಿಕೊಂಡಿರುವುದು ಸಂತಸದ ವಿಷಯವಾಗಿದೆ ಎಂದರು.

ನಗರಸಭೆ ಮಾಜಿಸದಸ್ಯ ಜೆ.ಮಹೇಶ್ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ ಮಕ್ಕಳ ಮನಸ್ಸನ್ನು ತಲುಪುವಲ್ಲಿ ಇಂಥ ಕಾರ್ಯಕ್ರಮಗಳು ಸಾರ್ಥಕತೆಯನ್ನು ಪಡೆದುಕೊಳ್ಳುತ್ತವೆ. ಸರಳತೆಯಲ್ಲೂ ಅದ್ದೂರಿತನದ ಸಂಪನ್ಮೂಲಗಳನ್ನು ಕನ್ನಡ ಗೀತೆಗಳ ಮೂಲಕ ಬಿತ್ತುವ ಕಾರ್ಯ ಶ್ಲಾಘನೀಯವಾದುದು ಎಂದರು. ಶಿಕ್ಷಣ ಸಂಯೋಜಕ ಜೆ.ಬಿ.ರವೀಂದ್ರನಾಥ್, ಎಸ್‍ಡಿಎಂಸಿ ಅಧ್ಯಕ್ಷ ಕೆ.ಕುಮಾರ್, ಸ.ಹಿ.ಪ್ರಾ.ಶಾಲೆಯ ಸಹಶಿಕ್ಷಕರಾದ ಬಿ.ವಿಮಲಾಕ್ಷಿ, ಟಿ.ಎನ್.ಶೋಭ, ಬಾದರದಿನ್ನಿ ಆಟ್ರ್ಸ್ ಅಕಾಡೆಮಿಯ ಪ್ರಕಾಶ್ ಬಾದರದಿನ್ನಿ ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು.

ನೀನಾಸಂ ಪದವೀಧರ ಹಾಗೂ ಕಸಾಪ ಜಿಲ್ಲಾ ಕಾರ್ಯದರ್ಶಿ ಕೆ.ಪಿ.ಎಂ.ಗಣೇಶಯ್ಯ ಕನ್ನಡ ಗೀತಗಾಯನ ಹಾಗೂ ಯೋಗಶಿಕ್ಷಕ ಎಂ.ಬಿ.ಮುರುಳಿ ಇವರು ಯೋಗ ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರ ನಿಗಧಿಪಡಿಸಿದ ಹುಯಿಲುಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆಯವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ಧಯ್ಯ ಪುರಾಣಿಕ ಬರೆದ ಹೊತ್ತಿತೋ ಹೊತ್ತಿತೂ ಕನ್ನಡದ ದೀಪ, ಚನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡದ ಧ್ವನಿಮುದ್ರಿತ ಗೀತೆಗಳನ್ನು ಹಾಡುವುದರೊಂದಿಗೆ ಯೋಗ ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ನಡೆಸಿಕೊಟ್ಟರು, ಹರ್ಷಿತ ಮತ್ತು ಸಿಂಚನ ಪ್ರಾರ್ಥಿಸಿದರು. ಸಹಶಿಕ್ಷಕಿ ಪಿ.ಬಿ.ಅನುಸೂಯಮ್ಮ ನಿರೂಪಿದರು.

Advertisement
Tags :
childrenchitradurgadaily activitiess. NagabhushanaYogasanaಎಸ್.ನಾಗಭೂಷಣ್ಚಿತ್ರದುರ್ಗನಿತ್ಯವೂ ಯೋಗಾಸನಮಕ್ಕಳು ದೈನಂದಿನ ಚಟುವಟಿ
Advertisement
Next Article