For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿ.ಐ.ಟಿ.ಯು. ಪ್ರತಿಭಟನೆ

05:49 PM Jun 01, 2024 IST | suddionenews
ಚಿತ್ರದುರ್ಗ   ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿ ಐ ಟಿ ಯು  ಪ್ರತಿಭಟನೆ
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಚಿತ್ರದುರ್ಗ : ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸ್ವೀಕರಿಸುವುದಕ್ಕೆ ವಿಳಂಭ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.

Advertisement

ಸೌಲಭ್ಯಗಳನ್ನು ಪಡೆಯಲು ಕೂಡಲೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಬೇಕು. ಮೇ.30 ಕ್ಕೆ ಮುಕ್ತಾಯಗೊಂಡಿರುವ ಕಾರ್ಮಿಕ ಮಕ್ಕಳ ಶೈಕ್ಷಣಿಕ ಅರ್ಜಿಗಳ ಸ್ವೀಕಾರವನ್ನು ಆ.31 ರತನಕ ವಿಸ್ತರಿಸಬೇಕು. 2023 ರ ಅಧಿಸೂಚನೆಯನ್ನು ರದ್ದುಪಡಿಸಿ 2021 ರ ಅಧಿಸೂಚನೆ ಅನ್ವಯ ಶೈಕ್ಷಣಿಕ ಧನ ಸಹಾಯ ನೀಡಬೇಕು.

Advertisement

ಹೊಸದಾಗಿ ಅರ್ಜಿ ಸಲ್ಲಿಸುವುದು ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಬೇಕು.
ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶದನ್ವಯ ಅಮೃತ ಹಾಗೂ ಅಕ್ಷತ ಎನ್ನುವ ವಿದ್ಯಾರ್ಥಿನಿಯರಿಗೆ ದಂಡ ಸಹಿತ ಶೈಕ್ಷಣಿಕ ಧನ ಸಹಾಯ ಪಾವತಿಸಬೇಕು. ಎಲ್ಲಾ ರೀತಿಯ ಖರೀಧಿಗಳನ್ನು ನಿಲ್ಲಿಸಿ ಜಾರಿಯಲ್ಲಿರುವ ಸೌಲಭ್ಯಗಳ ಧನ ಸಹಾಯವನ್ನು ನೇರ ವರ್ಗಾವಣೆ ಮೂಲಕ ಪಾವತಿಸಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.

Advertisement
Advertisement

ಸಿಐಟಿಯು. ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‌ಪೀರ್, ಬಿ.ಕೆ.ನಾಗರಾಜಚಾರಿ, ಮಂಜುನಾಥ, ಮಹಮದ್ ಜಿಕ್ರಿಯಾವುಲ್ಲಾ, ರಾಘವೇಂದ್ರ, ಅಬ್ದುಲ್ಲಾ, ರಶೀದ್, ಉಮೇಶ್, ಶೇಖ್‌ಕಲೀಂವುಲ್ಲಾ, ಕೆ.ಎನ್.ನಾಗರಾಜ್, ಸೈಯದ್ ಮುಜ್ಜು ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
Advertisement