ನಗರ ಶೌಚಾಲಯ ವರದಿ ವಿಚಾರ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ 5 ಲಕ್ಷ ದಂಡ..!
ಬೆಂಗಳೂರು: ನಗರಗಳ ಸಾರ್ವಜನಿಕ ಶೌಚಾಲಯಗಳ ಕುರಿತಾಗಿ ರಾಜ್ಯ ಸರ್ಕಾರ ವರದಿ ನೀಡಬೇಕಿತ್ತು. ಆದರೆ ಈ ವರದಿ ನೀಡದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಜೊತೆಗೆ ಐದು ಲಕ್ಷ ದಂಡವನ್ನು ವಿಧಿಸಿದೆ. ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿದೆ.
ಶೌಚಾಲಯಗಳ ನಿರ್ವಹಣೆ ಕುರಿತು ಸಾರ್ವಜನಿಕ ಅರ್ಜಿಯೊಂದು ಸಲ್ಲಿಕೆಯಾಗಿತ್ತು. ಈ ಸಂಬಂಧ ಸಾರ್ವಜನಿಕ ಹಾಗೂ ಸಮುದಾಯಗಳ ಶೌಚಾಲಯದ ಸ್ಥಿತಿ ಗತಿ ಕುರಿತು ಮೂರಿ ವಾರಗಳಲ್ಲಿ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆದರೆ ವರದಿ ಸಲ್ಲಿಸಲು ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಹೀಗಾಗಿ ಹೈಕೋರ್ಟ್ ದಂಡ ವಿಧಿಸಿದೆ.
ಜೊತೆಗೆ ನವೆಂಬರ್ 2ರಂದು ನಡೆಯುವ ವಿಚಾರಣೆಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ನಗರಾಭಿವೃದ್ಧಿ ಕಾರ್ಯದರ್ಶಿಗೆ ಆದೇಶಿಸಿದೆ. ಶೌಚಾಲಯ ನಿರ್ವಹಣೆ ಕೊರತೆ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಕೂಡ ನಿಗಾ ವಹಿಸಿದ ಬಿಬಿಎಂಪಿಗೆ ತರಾಟೆ ತೆಗೆದುಕೊಂಡಿದ್ದಾರೆ.