Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಿಎಂ ಬದಲಾವಣೆ ವಿಚಾರ : ಸ್ವಾಮೀಜಿಗಳು ಹೇಳಿದಾಕ್ಷಣ ಬದಲಾಗದು ಎಂದ ವಚನಾನಂದ ಶ್ರೀ

07:28 PM Jun 30, 2024 IST | suddionenews
Advertisement

 

Advertisement

ಚಿತ್ರದುರ್ಗ: ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಿ ಮಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಉತ್ತಮ ಸಹಕಾರವಿದೆ. ರಾಜ್ಯದಲ್ಲಿ ಸಿಎಂ ಮತ್ತು ಡಿಸಿಎಂ ಉತ್ತಮ ಆಡಳಿತ ನೀಡುತ್ತಿದ್ದಾರೆ. ಸ್ವಾಮೀಜಿಗಳು ಹೇಳಿದಾಕ್ಷಣ ಬದಲಾಗದಿರುವ ವಿಚಾರವದು ಅಂತ ಹರಿಹರ ಪಂಚಮಸಾಲಿ ಪೀಠದ ವಚಾನನಂದ ಸ್ವಾಮೀಜಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಸ್ವಾಮೀಜಿ, ಸಿಎಂ ಬದಲಾವಣೆ ಚಿಂತನೆ ಮಾಡಬೇಕಿರುವುದು ವರಿಷ್ಠರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ, ಬಾರದು ಬಪ್ಪದು ಬಪ್ಪದು ತಪ್ಪದು ಎಂಬ ವಚನದ ಮೇಲೆ ನಡೆಯುತ್ತಿದ್ದಾರೆ. ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ ಎಂದಿದ್ದಾರೆ.

Advertisement

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿ ವಿಶ್ವಕಪ್ ತಂದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ, ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇದ್ದಂತೆ. ತತ್ವ ಸಿದ್ಧಾಂತದ ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ನ್ಯಾಯವಿದೆ. ಹಿಂದೆ ಅನೇಕ ಲಿಂಗಾಯತರು ಮುಖ್ಯಮಂತ್ರಿ ಆಗಿದ್ದಾರೆ. ಈಗ ಸಿದ್ದರಾಮಯ್ಯ ಸಿಎಂ, ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್​​ಗೆ ಅವಕಾಶ ಸಿಗಲಿ. ಹಾಗೇ ಜಿ.ಪರಮೇಶ್ವರ್​ ಹಾಗೂ ಸತೀಶ್​ ಅವರಿಗೂ ಅವಕಾಶ ಇದೆ. ದಲಿತ ಸಿಎಂ ಎಂಬ ಮಾತುಗಳನ್ನು ನಾವು ಕೇಳುತ್ತಿದ್ದೇವೆ. SC, ST ಸಮುದಾಯಕ್ಕೂ ಪ್ರಾತಿನಿಧ್ಯ ಕೊಡಬೇಕಾಗುತ್ತದೆ. ಸಮಯ ಬಂದಾಗ ಲಿಂಗಾಯತರು ಸಿಎಂ ಆಗುವ ಯೋಗ ಬರುತ್ತೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸದ್ಯ ಡಿಸಿಎಂ ಹುದ್ದೆಗಳ ಹೆಚ್ಚಳ ಹಾಗೂ ಸಿಎಂ ಬದಲಾವಣೆಯದ್ದೇ ಜೋರು ಚರ್ಚೆಯಾಗುತ್ತಿದೆ. ಈಗಾಗಲೇ ಈ ಸಂಬಂಧ ಡಿಕೆ ಶಿವಕುಮಾರ್ ಎಚ್ಚರಿಕೆಯನ್ನು ನೀಡಿದ್ದಾರೆ.

Advertisement
Tags :
bengaluruchitradurgaCM change issuesuddionesuddione newsVachanananda Shriಚಿತ್ರದುರ್ಗಬೆಂಗಳೂರುವಚನಾನಂದ ಶ್ರೀಸಿಎಂ ಬದಲಾವಣೆ ವಿಚಾರಸುದ್ದಿಒನ್ಸುದ್ದಿಒನ್ ನ್ಯೂಸ್ಸ್ವಾಮೀಜಿ
Advertisement
Next Article