Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಸಿಎಂ : ಚಳ್ಳಕೆರೆ ಸೇರಿದಂತೆ ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ...!

01:55 PM Jun 28, 2024 IST | suddionenews
Advertisement

 

Advertisement

ನವದೆಹಲಿ, ಜೂನ್‌ 28- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

Advertisement

 

•ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಣಕ್ಕೆ, ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸಲು, ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ ಕೇಳಿದ್ದಾರೆ.

ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣ, ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣ, ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ, ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ. ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ, NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ, ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ, ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಮನವಿಗಳನ್ನು ಇಟ್ಟಿದ್ದಾರೆ.

Advertisement
Tags :
bengaluruchitradurgaCMdiscussionhighway projectsimportantmeets‌statesuddionesuddione newsUnion Minister Nitin Gadkariಕೇಂದ್ರ ಸಚಿವ ನಿತಿನ್ ಗಡ್ಕರಿಚರ್ಚೆಚಿತ್ರದುರ್ಗಪ್ರಮುಖಬೆಂಗಳೂರುಸಿಎಂಸುದ್ದಿಒನ್ಸುದ್ದಿಒನ್ ನ್ಯೂಸ್ಹೆದ್ದಾರಿ ಯೋಜನೆಗಳು
Advertisement
Next Article