For the best experience, open
https://m.suddione.com
on your mobile browser.
Advertisement

ರಾಜ್ಯದಲ್ಲಿ ಕೋಮು-ಗಲಭೆ ನಡೆಯದಂತೆ ಕಾಪಾಡಿದ ಪೊಲೀಸ್ ಹಾಗೂ ಗೃಹ ಇಲಾಖೆ ಸಿಎಂ ಸಿದ್ದರಾಮಯ್ಯ ಅಭಿನಂದನೆ..!

02:23 PM Jul 06, 2024 IST | suddionenews
ರಾಜ್ಯದಲ್ಲಿ ಕೋಮು ಗಲಭೆ ನಡೆಯದಂತೆ ಕಾಪಾಡಿದ ಪೊಲೀಸ್ ಹಾಗೂ ಗೃಹ ಇಲಾಖೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
Advertisement

Advertisement
Advertisement

ಬೆಂಗಳೂರು (ಜು 6): ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು‌ IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. SP-IG ಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಎಚ್ಚರಿಸಿದರು.

Advertisement
Advertisement

ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕುಶ ಪರಿಶೀಲನೆ ನಡೆಸಬೇಕು. ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಎಚ್ಚರಿಸಿದರು.

ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?/ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದರು. ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ. ರೌಡಿಗಳಿಗೆ ಪೊಲೀಸ್ ಭಯ ಇರಬೇಕು. ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಇದೆ ವೇಳೆ ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ ಗೆ ಮುಖ್ಯಮಂತ್ರಿಗಳು ಅಭಿನಂಧಿಸಿದರು.‌

Tags :
Advertisement