Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿ.ಎಂ.ಸಿದ್ದರಾಮಯ್ಯ

12:24 PM Dec 02, 2024 IST | suddionenews
Advertisement

ತುಮಕೂರು ಡಿ. 02: ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

Advertisement

ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದರು.

Advertisement

ಆದಷ್ಟು ಶೀರ್ಘದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ತಿಳಿಸಿದರು.

ಮೈಸೂರಿನಲ್ಲೂ ಜಾಗ ಕೊಡ್ತೀವಿ :

ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು.

ಗೃಹ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ರಘುರಾಮ್ ಭಟ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಸಕ ಸುರೇಶ್ ಗೌಡಗೆ ಸಿಎಂ ಟಾಂಗ್ :

ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು.

ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೆ ಉತ್ತರಿಸಿದರು.

Advertisement
Tags :
bengaluruchitradurgaCM Siddaramaiahinternational cricket stadiumplaying battingsuddionesuddione newstumkurಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಚಿತ್ರದುರ್ಗತುಮಕೂರುನಿರ್ಮಾಣಕ್ಕೆ ಚಾಲನೆಬೆಂಗಳೂರುಬ್ಯಾಟಿಂಗ್ಸಿ ಎಂ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article