ಕರ್ನಾಟಕದ ಸ್ತಬ್ಧ ಚಿತ್ರ ನಿರಾಕರಣೆ : ರಾಜನಾಥ್ ಸಿಂಗ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಈ ಬಾರಿಯೂ ಕರ್ನಾಟಕದ ಸ್ತಬ್ಧ ಚಿತ್ರವನ್ನು ನಿರಾಕರಣೆ ಮಾಡಲಾಗಿದೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ನಮ್ಮ ಕರ್ನಾಟಕದ ಸ್ತಬ್ಧ ಚಿತ್ರ ಈ ಬಾರಿ ಪ್ರದರ್ಶನವಾಗುತ್ತಿಲ್ಲ. ಇದು ಸಿಎಂ ಸಿದ್ದರಾಮಯ್ಯ ಅವರ ಬೇಸರಕ್ಕೆ ಕಾರಣವಾಗಿದೆ. ಈಗಾಗಲೇ ಈ ಬೇಸರವನ್ನು ಹೊರ ಹಾಕಿದ್ದಾರೆ. ಇದೀಗ ಈ ಸಂಬಂಧ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.
ಕಳೆದ 15 ವರ್ಷಗಳಿಂದ ಕರ್ನಾಟಕ ಕರ್ತವ್ಯ ಪಥದಲ್ಲಿ ನಡೆಯುವ ಪೆರೇಡ್‌ನಲ್ಲಿ ಭಾಗಿಯಾಗಿ ಹಲವು ಪ್ರಶಸ್ತಿ ಗಳಿಸಿದೆ. ಬ್ರ್ಯಾಂಡ್ ಬೆಂಗಳೂರು ಟ್ಯಾಬ್ಲೊ ಪರೇಡ್‌ನಲ್ಲಿ ಬೆಂಗಳೂರನ್ನು ಪ್ರತಿನಿಧಿಸುತ್ತೆ. ಬೆಂಗಳೂರು ಯುನೆಸ್ಕೋದ ಎರಡನೇ ಬೆಸ್ಟ್ ಸುಂದರ ಏರ್ಪೋರ್ಟ್ ಎಂಬ ಖ್ಯಾತಿ ಗಳಿಸಿದೆ. ಪೆರೇಡ್‌ಗೆ ಅವಕಾಶ ನೀಡದಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ನೀಡಬೇಕು. ಜನವರಿ 26ರಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ತಬ್ಧಚಿತ್ರ, ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರವನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ವಿಚಾರ ತಿಳಿಸಿ, ಮನವಿ ಮಾಡಿದ್ದಾರೆ.
ಈ ಬಗ್ಗೆ ಈಗಾಗಲೇ ವಿಜಯೇಂದ್ರ ಅವರು ಮಾತನಾಡಿ, ಬೇರೆ ರಾಜ್ಯಗಳಿಗೂ ಅವಕಾಶ ಕೊಡುವ ನಿಟ್ಟಿನಲ್ಲಿ ಈ ರೀತಿಯ ನಿರ್ಧಾರ ಮಾಡಿದ್ದಾರೆ. ಮುಂದಿನ ವರ್ಷ ಕೊಡುತ್ತಾರೆ ಎಂದಿದ್ದಾರೆ. ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೆ ಇರುವುದಕ್ಕೆ ರಾಜ್ಯದ ಜನರಲ್ಲೂ ಬೇಸರ ವ್ಯಕ್ತವಾಗಿದೆ.