Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕರ್ನಾಟಕದ ಸ್ತಬ್ಧ ಚಿತ್ರ ನಿರಾಕರಣೆ : ರಾಜನಾಥ್ ಸಿಂಗ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

11:34 AM Jan 12, 2024 IST | suddionenews
Advertisement

 

Advertisement

ಬೆಂಗಳೂರು: ಈ ಬಾರಿಯೂ ಕರ್ನಾಟಕದ ಸ್ತಬ್ಧ ಚಿತ್ರವನ್ನು ನಿರಾಕರಣೆ ಮಾಡಲಾಗಿದೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ನಮ್ಮ ಕರ್ನಾಟಕದ ಸ್ತಬ್ಧ ಚಿತ್ರ ಈ ಬಾರಿ ಪ್ರದರ್ಶನವಾಗುತ್ತಿಲ್ಲ. ಇದು ಸಿಎಂ ಸಿದ್ದರಾಮಯ್ಯ ಅವರ ಬೇಸರಕ್ಕೆ ಕಾರಣವಾಗಿದೆ. ಈಗಾಗಲೇ ಈ ಬೇಸರವನ್ನು ಹೊರ ಹಾಕಿದ್ದಾರೆ. ಇದೀಗ ಈ ಸಂಬಂಧ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ 15 ವರ್ಷಗಳಿಂದ ಕರ್ನಾಟಕ ಕರ್ತವ್ಯ ಪಥದಲ್ಲಿ ನಡೆಯುವ ಪೆರೇಡ್‌ನಲ್ಲಿ ಭಾಗಿಯಾಗಿ ಹಲವು ಪ್ರಶಸ್ತಿ ಗಳಿಸಿದೆ. ಬ್ರ್ಯಾಂಡ್ ಬೆಂಗಳೂರು ಟ್ಯಾಬ್ಲೊ ಪರೇಡ್‌ನಲ್ಲಿ ಬೆಂಗಳೂರನ್ನು ಪ್ರತಿನಿಧಿಸುತ್ತೆ. ಬೆಂಗಳೂರು ಯುನೆಸ್ಕೋದ ಎರಡನೇ ಬೆಸ್ಟ್ ಸುಂದರ ಏರ್​ಪೋರ್ಟ್ ಎಂಬ ಖ್ಯಾತಿ ಗಳಿಸಿದೆ. ಪೆರೇಡ್‌ಗೆ ಅವಕಾಶ ನೀಡದಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ನೀಡಬೇಕು‌. ಜನವರಿ 26ರಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಸ್ತಬ್ಧಚಿತ್ರ, ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರವನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ವಿಚಾರ ತಿಳಿಸಿ, ಮನವಿ ಮಾಡಿದ್ದಾರೆ.

Advertisement

ಈ ಬಗ್ಗೆ ಈಗಾಗಲೇ ವಿಜಯೇಂದ್ರ ಅವರು ಮಾತನಾಡಿ, ಬೇರೆ ರಾಜ್ಯಗಳಿಗೂ ಅವಕಾಶ ಕೊಡುವ ನಿಟ್ಟಿನಲ್ಲಿ ಈ ರೀತಿಯ ನಿರ್ಧಾರ ಮಾಡಿದ್ದಾರೆ. ಮುಂದಿನ ವರ್ಷ ಕೊಡುತ್ತಾರೆ ಎಂದಿದ್ದಾರೆ. ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೆ ಇರುವುದಕ್ಕೆ ರಾಜ್ಯದ ಜನರಲ್ಲೂ ಬೇಸರ ವ್ಯಕ್ತವಾಗಿದೆ.

Advertisement
Tags :
bengaluruCM SiddaramaiahLetterRajnath Singhsuddioneಕರ್ನಾಟಕನಿರಾಕರಣೆಬೆಂಗಳೂರುರಾಜನಾಥ್ ಸಿಂಗ್ಸಿಎಂ ಸಿದ್ದರಾಮಯ್ಯಸುದ್ದಿಒನ್ಸ್ತಬ್ಧ ಚಿತ್ರ
Advertisement
Next Article