ಕೊರೊನಾ ಆತಂಕ: ಶಾಲೆಗಳಲ್ಲಿ ಹೈಅಲರ್ಟ್ : ಹೊಸ ಮಾರ್ಗಸೂಚಿಯಲ್ಲಿ ಏನಿದೆ..?
ಬೆಂಗಳೂರು: ರಾಜ್ಯದಲ್ಲೆಡೆ ಕೊರೊನಾ ಆತಂಕ ಮನೆ ಮಾಡಿದೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದು ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಭಯ ಹುಟ್ಟಿಸುತ್ತಿದೆ. ಈಗಾಗಲೇ ರಾಜ್ಯದಲ್ಲೂ ಕೊರೊನಾದಿಂದ ಸಾವನ್ನಪ್ಪಿದವರ ಪ್ರಕರಣ ದಾಖಲಾಗಿದೆ. ಹೀಗಾಗಿ ಶಾಲೆಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹೊಸದಾಗಿ ಮಾರ್ಗಸೂಚಿ ಹೊರಡಿಸಲಾಗಿದೆ.
ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ಪ್ರತ್ಯೇಕ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಮಕ್ಕಳ ಆರೋಗ್ಯ ಕಾಪಾಡುವುದಕ್ಕೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಮಕ್ಕಳ ಮೇಲೆ ಪೋಷಕರು ಕೂಡ ಹೆಚ್ಚಿನದಾಗಿ ಗಮನಹರಿಸಬೇಕು, ಸದ್ಯದ ವಾತಾವರಣದಲ್ಲಿ ಮಕ್ಕಳು ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಕಿಮ್ಸ್ ಹೊರಡಿಸಿರುವ ಮಾರ್ಗಸೂಚಿಯಲ್ಲಿ, ರಜಾ ದಿನಗಳಲ್ಲಿ ಪೋಷಕರು ಮಕ್ಕಳನ್ನು ಜನಸಂದಣಿ ಇರುವ ಸ್ಥಳಕ್ಕೆ ಅಥವಾ ಜನಜಂಗುಳಿ ಇರುವ ಜಾಗಕ್ಕೆ ಪ್ರವಾಸಕ್ಕೆ ಕರೆದುಕೊಂಡು ಹೋಗದಂತೆ ಸೂಚನೆ.
*ಮಕ್ಕಳಿಗೆ ನಿತ್ಯವೂ ಟೆಂಪರೇಚರ್ ಚೆಕ್ ಮಾಡುವಂತೆ ಸೂಚನೆ ನೀಡಲಾಗಿದೆ.
*ಟ್ರಾವೆಲ್ ಹಿಸ್ಟರಿ ಇರುವ ಮಕ್ಕಳ ಬಗ್ಗೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ.
*ಶಾಲೆಯ ಆಡಳಿತ ಮಂಡಳಿಯಿಂದ ಪೋಷಕರಿಗೂ ಕೊರೋನಾ ಬಗ್ಗೆ ಎಚ್ಚರಿಕೆಯ ಸಂದೇಶ ನೀಡಲಾಗುತ್ತಿದೆ.
ಕೊರೊನಾ ಬಹಳ ಬೇಗನೆ ಅಟ್ಯಾಕ್ ಆಗುವುದು ಮಕ್ಕಳು ಮತ್ತು ವಯಸ್ಸಾದವರಿಗೆ. ಹೀಗಾಗಿ ಅವರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ರಾಜ್ಯದಲ್ಲಿ ಈಗಾಗಲೇ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತದೆ. ರಾಜ್ಯದಲ್ಲಿ ಎಲ್ಲೆಲ್ಲಾ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ ಎಂಬುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಯ ವಿಧಾನಕ್ಕೆ ನಿಗಾ ಇಡಲಾಗಿದೆ.