For the best experience, open
https://m.suddione.com
on your mobile browser.
Advertisement

ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ..!

03:10 PM Sep 25, 2024 IST | suddionenews
ಸಿಎಂ ಸಿದ್ದರಾಮಯ್ಯ ವಿರುದ್ಧ fir ದಾಖಲಿಸಲು ಕೋರ್ಟ್ ಆದೇಶ
Advertisement

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರುಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ‌.

Advertisement

82ನೇ ಸಿಸಿಹೆಚ್ ಜನಪ್ರತಿನಿಧಿಗಳ ನ್ಯಾಯಾಲಯ ಈ ಆದೇಶ ನೀಡಿದೆ. ವಿಶೇಷ ಕೋರ್ಟ್ ನ್ಯಾಯಾಧೀಶ ಗಜಾನನ ಭಟ್ ಅವರು ಈ ಮಹತ್ವದ ಆದೇಶ ನೀಡಿದ್ದಾರೆ. ಮೈಸೂರು ಲೋಕಾಯುಕ್ತಕ್ಕೆ ಕೋರ್ಟ್ ಈ ಆದೇಶವನ್ನು ನೀಡಿದೆ. CRPC ಸೆಕ್ಷನ್ 156(3) ರ ಅಡಿಯಲ್ಲಿ ಕೇಸ್ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದೆ. ತನಿಖಾ ವರದಿ ನೀಡಲು 3 ತಿಂಗಳ ಗಡುವು ನೀಡಲಾಗಿದೆ. ಡಿಸೆಂಬರ್ ವೇಳೆಗೆ ತನಿಖಾ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಸ್ನೇಹಮಹಿ ಕೃಷ್ಣ ಎಂಬುವವರು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು‌. ಪತ್ನಿ ಹೆಸರಿನಲ್ಲಿ ಅಕ್ರಮ ಮೂಡಾ ಸೈಟ್ ಪಡೆದಿದ್ದಾರೆಂದು ಮೈಸೂರಿನಲ್ಲಿ ಕೇಸ್ ದಾಖಲಿಸಲಾಗಿತ್ತು. ಸ್ನೇಹಮಹಿ ಕೃಷ್ಣ ಅವರು ಸಲ್ಲಿಸಿದ್ದ ಪಿಸಿಆರ್ ಬಗ್ಗೆ ಇಂದು ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆ ನಡೆಸಿ, ಈ ಆದೇಶ ಹೊರಡಿಸಿದೆ. ಆಗಸ್ಟ್ ನಲ್ಲಿಯೇ ಸ್ನೇಹಮಹಿ ಕೃಷ್ಣ ಅವರ ಪರವಾಗಿ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಂಡಿಸಿದರು. ವಾದ ಆಲಿಸಿದ ಕೋರ್ಟ್ ಇಂದಿಗೆ ತೀರ್ಪು ಕಾದಿರಿಸಿತ್ತು. ಅದರ ನಡುವೆಯೇ ಗವರ್ನರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಜನಪ್ರತಿನಿಧಿಗಳ ಕೋರ್ಟಿನ ಆದೇಶಕ್ಕೆ ತಡೆ ನೀಡಿತ್ತು. ನಿನ್ನೆ ಹೈಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದ್ದು, ಅಧೀನ ನ್ಯಾಯಾಲಯದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ತೆರವು ಮಾಡಿತ್ತು.

Advertisement

Tags :
Advertisement