ಚನ್ನಪಟ್ಟಣಕ್ಕೆ ಸಿಪಿ ಯೋಗೀಶ್ವರ್ ಸ್ಪರ್ಧೆ ಬಹುತೇಕ ಖಚಿತ : ಸಂಜೆ ಒಳಗೆ ಘೋಷಣೆ..!
ಬೆಂಗಳೂರು: ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಅಂದಿನಿಂದನೂ ಆ ಕ್ಷೇತ್ರದಿಂದ ತಾನೇ ಸ್ಪರ್ಧಿಸುವುದಾಗಿ ಸಿಪಿ ಯೋಗೀಶ್ವರ್ ಹೇಳುತ್ತಿದ್ದರು. ಉಪಚುನಾವಣೆಯ ದಿನಾಂಕ ಘೋಷಣೆಯಾದ ಮೇಲೂ ನಾನೇ ಅಭ್ಯರ್ಥಿ ಎನ್ನುತ್ತಿದ್ದರು. ಆದರೆ ಅಲ್ಲೊಂದು ಟ್ವಿಸ್ಟ್ ಕೂಡ ಶುರುವಾಗಿತ್ತು. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ಪರ್ಧಿಸುವಂತೆ ಮನವೊಲಿಸಲಾಗುತ್ತಿದೆ ಎನ್ನಲಾಗಿತ್ತು. ನಿಖಿಲ್ ಕುಮಾರಸ್ವಾಮಿ ನಿಲ್ಲದೆ ಹೋದರೆ ಅನಿತಾ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುತ್ತಾರೆ ಎಂಬ ಮಾತಿತ್ತು. ಆದರೆ ಈಗ ಮೂಲಗಳ ಪ್ರಕಾರ ಸಿಪಿ ಯೋಗೀಶ್ವರ್ ಅವರಿಗೆ ಟಿಕೆಟ್ ನೀಎಲಾಗುತ್ತಿದೆ ಎನ್ನಲಾಗಿದೆ.
ಇಂದು ಸಂಜೆಯೊಳಗೆ ಚನ್ನಪಟ್ಟಣ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಈಗಾಗಲೇ ಶಿಗ್ಗಾವಿ ಮತ್ತು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಘೋಷಣೆ ಮಾಡಲಾಗಿದೆ. ಈಗ ಚನ್ನಪಟ್ಟಣದಿಂದ ಸಿಪಿ ಯೋಗೀಶ್ವರ್ ಗೆ ಟಿಕೆಟ್ ನೀಡಿದರೆ ಮೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯೇ ಸ್ಪರ್ಧೆ ಮಾಡಿದಂತೆ ಆಗುತ್ತದೆ.
ಈ ಸಂಬಂಧ ನಿನ್ನೆ ರಾತ್ರಿಯೂ ಒಂದು ರೌಂಡ್ ಸಭೆಯಾಗಿದೆ. ಈ ಸಭೆಯಲ್ಲಿ ಬಿವೈ ವಿಜಯೇಂದ್ರ, ಆರ್. ಅಶೋಕ್ ಹಾಗೂ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಇದು ನಿಮ್ಮದೇ ಕ್ಷೇತ್ರ. ನಿಮಗೆ ಇಷ್ಟ ಬಂದವರನ್ನೇ ಘೋಷಣೆ ಮಾಡಿ ಎಂದು ಆರ್.ಅಶೋಕ್ ಮತ್ತು ವಿಜಯೇಂದ್ರ ಅವರು ಹೇಳಿದ್ದಾರಂತೆ. ಈ ಮೂಲಕ ಕುಮಾರಸ್ವಾಮಿ ಅವರು ಜೆಡಿಎಸ್ ನಿಂದಾನೇ ಸ್ಪರ್ಧಿಯನ್ನು ಇಳಿಸಲಿದ್ದು, ಸಿಪಿ ಯೋಗೀಶ್ವರ್ ಜೆಡಿಎಸ್ ನಿಂದಾನೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.