For the best experience, open
https://m.suddione.com
on your mobile browser.
Advertisement

ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿ :  ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಮುಖ ಘೋಷಣೆ...!

08:49 PM Aug 25, 2024 IST | suddionenews
ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿ    ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಮುಖ ಘೋಷಣೆ
Advertisement

ಸುದ್ದಿಒನ್ : ರಾಜ್ಯದ ಮಾರುಕಟ್ಟೆಗಳಲ್ಲಿ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ. ಅಂತಹ ಎಲ್ಲ ರೈತರ ಪರ ಕೇಂದ್ರ ಸರ್ಕಾರ ನಿಂತಿದೆ ಎಂದು ತಿಳಿಸಿದರು.

Advertisement

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಬೆಂಬಲ ಬೆಲೆ ಯೋಜನೆಯಡಿ ಬೇಳೆಕಾಳು ಮತ್ತು ಸೂರ್ಯಕಾಂತಿ ಬೆಳೆಗಳನ್ನು ಖರೀದಿಸಲು ಕೇಂದ್ರ ಅನುಮತಿ ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ (MSP) ಹೆಸರು ಕಾಳು ಪ್ರತಿ ಕ್ವಿಂಟಲ್‌ಗೆ ರೂ. 8682 (ಎಂಎಸ್ ಪಿ) ದರದಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದರು. ಕರ್ನಾಟಕ ರಾಜ್ಯದ ಮಾರುಕಟ್ಟೆಯಲ್ಲಿ ಹೆಸರು ಕಾಳು ಮತ್ತು ಸೂರ್ಯಕಾಂತಿ ಬೆಲೆ ಕುಸಿದಿದೆ ಎಂದು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹಂಚಿಕೊಳ್ಳಲಾಗಿದೆ.

https://x.com/JoshiPralhad/status/1827622103333683558?t=k-4YIGgTi_FYTS3_uMNTQg&s=19

Advertisement
Advertisement

ಎಂಎಸ್ ಪಿ ಅಡಿಯಲ್ಲಿ ಬೆಳೆ ಖರೀದಿಸಲಾಗುವುದು. ಪ್ರತಿ ಕ್ವಿಂಟಾಲ್‌ಗೆ 8682 ರೂ.ನಂತೆ 2215 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಕೇಂದ್ರ ಅನುಮತಿ ನೀಡಿದೆ ಎಂದು ಪ್ರಹ್ಲಾದ ಜೋಶಿ ಹೇಳಿದರು. ಅದೇ ರೀತಿ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಅನುಮೋದನೆ ನೀಡಲಾಯಿತು.

ಕರ್ನಾಟಕ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬಂದ ಕೂಡಲೇ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೆಸರು ಮತ್ತು ಸೂರ್ಯಕಾಂತಿ ಬೆಳೆಗಳನ್ನು ಖರೀದಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು. ಕೂಡಲೇ ಕೇಂದ್ರ ಸಚಿವರ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಅನುಮತಿ ನೀಡುವಂತೆ ಸೂಚಿಸಿದ್ದೇನೆ ಎಂದರು. ಇದರ ಪ್ರಕಾರ ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಪತ್ರದ ಮೂಲಕ ಅನುಮತಿ ನೀಡಿದೆ ಎಂದರು.

ತಮ್ಮ ಮನವಿಗೆ ತಕ್ಷಣ ಸ್ಪಂದಿಸಿ ಖರೀದಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚವಾಣ್ ಅವರಿಗೆ ಪ್ರಹ್ಲಾದ್ ಜೋಶಿ ಧನ್ಯವಾದ ಅರ್ಪಿಸಿದರು. ಕರ್ನಾಟಕ ಸರ್ಕಾರ ಕೂಡಲೇ ಖರೀದಿ ಪ್ರಕ್ರಿಯೆ ಆರಂಭಿಸಿ ರಾಜ್ಯಾದ್ಯಂತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ತಿಳಿಸಿದರು.

ಪ್ರಧಾನಿ ಮೋದಿಯವರ ಸರ್ಕಾರ ದೇಶದ ಪ್ರತಿಯೊಬ್ಬ ರೈತರಿಗಾಗಿ ಕೆಲಸ ಮಾಡುತ್ತಿದೆ ಎಂದರು. ಪ್ರತಿಯೊಂದು ಸಮಸ್ಯೆಗೂ ಸೂಕ್ತ ಹಾಗೂ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ರೈತರನ್ನು ಬೆಂಬಲಿಸುತ್ತದೆ ಎಂದು ವಿವರಿಸಿದರು.

Tags :
Advertisement