Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಡಿಡಿಪಿಐ, ಬಿಇಒ ಅಮಾನತು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

07:41 PM Jun 21, 2024 IST | suddionenews
Advertisement

ವಿಜಯನಗರ, ಜೂನ್. 21 : ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10 ನೇ ಸ್ಥಾನದಲ್ಲಿದ್ದ ಜಿಲ್ಲೆ 27 ನೇ ಸ್ಥಾನಕ್ಕೆ ಕುಸಿದಿದೆ. ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದು ಪರೀಕ್ಷಾ ಅಕ್ರಮವಾಗಿರುವುದರಿಂದ ಇಷ್ಟೊಂದು ವ್ಯಾತ್ಯಾಸವಾಗಲು ಕಾರಣ ಎಂದು ಹೇಳಿದರು.

Advertisement

ಈ ಕಾರಣಕ್ಕಾಗಿ ಡಿಡಿಪಿಐ ಅವರನ್ನು ಅಮಾನತು ಗೊಳಿಸಲು ಹಾಗೂ ಬಿಇಒ ಗಳಿಗೆ ನೋಟೀಸು ಜಾರಿಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದರು.

Advertisement

ಶಿಕ್ಷಕರೂ ಕೂಡ ಇದಕ್ಕೆ ಕಾರಣಕರ್ತರು. ಜಿಲ್ಲಾ ಪಂಚಾಯತಿ ಸಿಇಒ ಕೂಡ ಇದಕ್ಕೆ ಜವಾಬ್ದಾರರಾಗಿರುವುದರಿಂದ  ಅವರಿಗೂ ನೋಟೀಸು ಕೊಡುವಂತೆ ಸೂಚಿಸಲಾಗಿದೆ ಎಂದರು.

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ಜಿಲ್ಲೆ 10 ನೇ ಸ್ಥಾನದಿಂದ ೨೭ ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಕ್ಕಾಪಟ್ಟೆ ಸಿಟ್ಟಾದ ಸಿಎಂ, ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಡಿಡಿಪಿಐ ಅವರನ್ನು ಪ್ರಶ್ನಿಸಿದರು.

ಎಸ್ಎಸ್ಎಸ್ಸಿ ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಿಲಿತಾಂಶ ಪ್ರಮಾಣ ಕುಸಿದಿರುವುದಕ್ಕೆನೀವೇ ಕಾರಣ. ನಿಮ್ಮ ಬಿಇಒ ಗಳು, ಶಿಕ್ಷಕರ ಪ್ರಯತ್ನ ಏನು? ಯಾವ ದಿಕ್ಕಿನಲ್ಲಿದೆ? ಈ ಕಳಪಡೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ ಎಂದು ಸಿಎಂ ಡಿಡಿಪಿಐ ಗೆ ಪ್ರಶ್ನಿಸಿದರು. ಈ ಬಾರಿ ಶೇ೨೦ ರಷ್ಟು ಗ್ರೇಸ್ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದ್ದೀರಿ ಎಂದರೆ ನಿಮ್ಮ ಒಟ್ಟು ಸಾಧನೆ ಬಗ್ಗೆ ನಿಮಗೆ ಸಮಾಧಾನ ಇದೆಯೇ ಎಂದು ಪ್ರಶ್ನಿಸಿದರು.

• 10 ರಿಂದ 27ನೇ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕಲ್ವಾ ಎಂದು ಸಿಇಒ ಅವರನ್ನು ಪ್ರಶ್ನಿಸಿದರು.

•ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್ ಅವರಿಗೆ ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಸಂಪರ್ಕಿಸಿದ ಸಿಎಂ, ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒ ಅವರಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿ ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು. ಡಿಡಿಪಿಐ ಅವರನ್ನು ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರು ಸಭೆಯಿಂದ ಹೊರಗೆ ನಡೆಯುವಂತೆ ಸೂಚಿಸಿದರು.

ಎಸ್.ಎಸ್.ಎಲ್ ಸಿ ಕೊಚಿಂಗ್ ಸುಧಾರಿಸಲು ಸೂಚನೆ :  ವಿಜಯನಗರ ಜಿಲ್ಲೆ ಮಾತ್ರವಲ್ಲದೇ  ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆಯಾಗಿದೆ  ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅಕ್ರಮಗಳನ್ನು ತಪ್ಪಿಸಿದ್ದೇವೆ ಅದಕ್ಕಾಗಿ ಫಲಿತಾಂಶ ಕಡಿಮೆಯಾಗಿದೆ ಎಂದು ಹೇಳಿದ್ದಾರೆ ಮುಂದಿನ ವರ್ಷ ಕೃಪಾಂಕವನ್ನು ನೀಡಬಾರದೆಂಬ ಸೂಚನೆ ನೀಡಲಾಗಿದೆ ಎಂದರು. ಮೆರಿಟ್ ಆಧಾರದ ಮೇಲೆ ಉತ್ತೀರ್ಣರಾನ್ನಗಿಸುವುದಲ್ಲದೇ  ಕೋಚಿಂಗ್  ಕೂಡ ಸುಧಾರಣೆಯಾಗಬೇಕೆಂದು  ನೀಡಬೇಕು ಎಂದು ಸೂಚಿಸಿದ್ದೇನೆ ಎಂದರು.

Advertisement
Tags :
bengalurubeochitradurgaCM Siddaramaiahddpisuddionesuddione newsಚಿತ್ರದುರ್ಗಡಿಡಿಪಿಐಬಿಇಒ ಅಮಾನತುಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article