ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು : ಡ್ರಗ್ ಕಂಟ್ರೋಲರ್ ಸಸ್ಪೆಂಡ್..!
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ನಾಲ್ಕು ಜನ ಬಾಣಂತಿಯರು ಬ್ಯಾಕ್ ಟು ಬ್ಯಾಕ್ ಸಾವನ್ನಪ್ಪಿದ್ದು, ಕಳೆದ ಒಂದು ವಾರದ ಹಿಂದೆ ಮತ್ತೊಬ್ಬ ಬಾಣಂತಿಯ ಸಾವಾಗಿದೆ. ಇದರಿಂದ ಜಿಲ್ಲೆಯ ಜನ ಸಹಜವಾಗಿಯೇ ಆತಂಕಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇದೊಇಗ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಅಮಾನತು ಮಾಡಿದ್ದಾರೆ.
ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಿಂಗರ್ ಲ್ಯಾಕ್ಟೇಡ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೃತರಿಗೆ ತಲಾ ಎರೆಉ ಲಕ್ಷ ಘೋಷಣೆ ಮಾಡಲಾಗಿದೆ. ಡ್ರಗ್ ಪೂರೈಸಿದ ಕಂಪನಿಯಿಂದಲೂ ಪರಿಹಾರ ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚಿಸಲಾಗಿದೆ.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರ. ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದರು.