ಬಳ್ಳಾರಿಯಲ್ಲಿ ಬಾಣಂತಿಯರ ಸಾವು : ಲೋಕಾಯುಕ್ತಕ್ಕೆ ಬಿಜೆಪಿ ನಿಯೋಗ ದೂರು..!
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ರಾಜ್ಯದಲ್ಲಿ ಗಾಬರಿ ಹೆಚ್ಚಿಸಿದೆ. ಬೀಮ್ಸ್ ಆಸ್ಪತ್ರೆಯಲ್ಲಿ ಈಗಾಗಲೇ ಐದು ಜನ ಬಾಣಂತಿಯರು ಸಿಜೇರಿಯನ್ ಬಳಿಕ ಸಾವನ್ನಪ್ಪಿದ್ದಾರೆ. ಆದರೆ ನಿನ್ನೆ ಮತ್ತೆ ಇಬ್ಬರು ಬಾಣಂತಿಯರು ಸಾವನ್ನಪ್ಪಿರುವುದು, ಗರ್ಭಿಣಿಯರ ಆತಂಕಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಇದೆ ಸಂಬಂಧ ಬಿಜೆಪಿ ನಿಯೋಗ ಲೋಕಾಯುಕ್ತಕ್ಕೆ ದೂರು ನೀಡಿದೆ.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಸಿಕೆ ರಾಮಮೂರ್ತಿ ಮತ್ತು ಎಂಎಲ್ಸಿ ರವಿಕುಮಾರ್ ಒಳಗೊಂಡ ನಿಯೋಗವೂ ಇಂದು ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ದೂರಿನಲ್ಲಿ ಮುಖ್ಯವಾಗಿ ಬಾಣಂತಿಯರ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿವಂತೆ ಒತ್ತಾಯಿಸಿದ್ದಾರೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇತ್ತೀಚೆಗೆ ತಜ್ಞರ ಸಮಿತಿಯೊಂದನ್ನು ರಚಿಸಿ ಬಾಣಂತಿಯರ ಸಾವಿಗೆ ಕಾರಣವೇನೆಂಬುದನ್ನು ಪತ್ತೆ ಹಚ್ಚಲು ತಿಳಿಸಿತ್ತು. ಅದರಂತೆ ತಜ್ಞರ ಸಮಿತಿಯೂ ಬಾಣಂತೊಯರ ಸಾವಿಗೆ IV ಗ್ಲೂಕೋಸ್ ಜಾರಣ ಎಂಬ ವರದಿ ಬಹಿರಂಗಗೊಳಿಸಿತ್ತು. ಇಷ್ಟಾದರೂ ಕೂಡ ಬಾಣಂತಿಯರ ಸಾವು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ.
ಈ ಪ್ರಕರಣವೂ ಕಾಂಗ್ರೆಸ್ ಸರ್ಕಾರದ, ಮುಖ್ಯವಾಗಿ ಆರೋಗ್ಯ ಸಚುವಾಲಯದ, ಆರೋಗ್ಯ ರಕ್ಷಣೆಯ ಮೂಲಭೂತ ಮಾನದಂಡಗಳನ್ನು ಖಾತ್ರಿಪಡಿಸುವಲ್ಲಿ ವೈಪೊಲಯವನ್ನು ಪದರತಿಬಿಂಬಿಸುತ್ತದೆ. ಘೊಇರ ನಿರ್ಲಕ್ಷ್ಯ, ಸತ್ಯವನ್ನು ಮರೆಮಾಚಲು ಮುಂದಾಗಿರುವುದು ಖಂಡನೀಯ. ನವೆಂಬರ್ 4 ರಂದು ಕೂಡ್ಲಿಗಿಯ ಮಹಿಳೆಯೊಬ್ಬರು ಹೆರಿಗೆಗೆಂದು ಬಿಮ್ಸ್ ಗೆ ದಾಖಲಾಗಿದ್ದಾರೆ. ಆದರೆ ಹೆರಿಗೆಯಾದ ಎರಡೇ ದಿನಕ್ಕೆ ಸಾವನ್ನಪ್ಪಿದ್ದಾರೆ. ಈ ಘಟನೆಗಳಿಂದ ನಿರ್ಲಕ್ಷ್ಯ ಎದ್ದು ಕಾಣುತ್ತದೆ ಎಂದು ಬಿಜೆಪಿ ತನ್ನ ಪತ್ರದಲ್ಲಿ ಬರೆದಿದೆ.