Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಎಸ್.ಎಂ.ಕೃಷ್ಣ ನಿಧನ : ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜು ರಜೆ

11:45 AM Dec 10, 2024 IST | suddionenews
Advertisement

 

Advertisement

ಬೆಂಗಳೂರು: ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ರಾಜಕೀಯಕ್ಕೆ ಬಂದಾಗಿನಿಂದ ಹಲವು ಕ್ಷೇತ್ರಗಳಲ್ಲಿ ಸೇವೆಗಳನ್ನು ಸಲ್ಲಿಸಿದ್ದಾರೆ. ಜೊತೆಗೆ ಅವರು ನೀಡಿರುವ ಕೊಡುಗೆಯೂ ಅಪಾರವಾಗಿದೆ. ಅವರಿಗೆ ಗೌರವ ಪೂರ್ಣ ನಮನದೊಂದಿಗೆ ಬೀಳ್ಕೊಡುಗೆ ನೀಡುತ್ತಿದ್ದು, ಸರ್ಕಾರದಿಂದ ರಜೆ ಘೋಷಣೆ ಮಾಡಲಾಗಿದೆ.

ನಾಳೆ ಎಸ್.ಎಂ.ಕೃಷ್ಣ ಅವರ ಸ್ವಗ್ರಾಮ ಮಂಡ್ಯದ ಸೋಮನಹಳ್ಳಿಯಲ್ಲಿ ಜರುಗಲಿದೆ. ಕುಟುಂಬಸ್ಥರು, ಆಪ್ತರು, ರಾಜಕಾರಣಿಗಳು ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮರಯಗುತ್ತಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವಾನ ಹೇಳುತ್ತಿದ್ದಾರೆ.

Advertisement

ಇದೀಗ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. 'ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು 2:11.12.20240 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ: 11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು' ಎಂದು ಆದೇಶದಲ್ಲಿ ಹೊರಡಿಸಲಾಗಿದೆ.

Advertisement
Tags :
bengaluruchitradurgaholidaykannadaKannadaNewsSchool-CollegeSm krishnasuddionesuddionenewsಎಸ್ ಎಂ ಕೃಷ್ಣಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗನಿಧನಬೆಂಗಳೂರುರಜೆಶಾಲೆ-ಕಾಲೇಜುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article