Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಸೋಲು : ರಾಹುಲ್ ಗಾಂಧಿಗೆ ಪ್ರಮುಖ ಹುದ್ದೆ

07:28 PM Jun 08, 2024 IST | suddionenews
Advertisement

ಸುದ್ದಿಒನ್, ನವದೆಹಲಿ,ಜೂ.08 : 2024 ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಅಗತ್ಯವಾದ ಸ್ಥಾನಗಳ ಕೊರತೆಯಿಂದ ಇಂಡಿಯಾ ಮೈತ್ರಿಕೂಟ ಅಧಿಕಾರದ ಗದ್ದುಗೆ ಏರಲು ವಿಫಲವಾಗಿದೆ.  ಬಿಜೆಪಿಗೆ ಸ್ವಂತ ಬಲದಿಂದ ಬಹುಮತ ಸಿಗದ ಕಾರಣ ಮಿತ್ರಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಲು ಸಿದ್ಧತೆ ನಡೆಸಿದೆ.  ಇಂಡಿಯಾ ಮೈತ್ರಿಕೂಟ ಕೂಡ ಅಧಿಕಾರಕ್ಕೇರಲು ಸಾಕಷ್ಟು ಪ್ರಯತ್ನ ನಡೆಸಿತು. ಆದರೆ ಇದುವರೆಗೂ ಯಶಸ್ವಿಯಾಗದ ಕಾರಣ ವಿರೋಧ ಪಕ್ಷದಲ್ಲಿ ಕೂರುವುದಾಗಿ ಘೋಷಿಸಿದೆ. ಆದರೆ ಇಂಡಿಯಾ ಮೈತ್ರಿಕೂಟ ಸೋತರೂ ನಾವೆಲ್ಲರೂ ಒಟ್ಟಾಗಿ ಹೋರಾಡಿದ್ದೇವೆ ಮತ್ತು ಒಗ್ಗಟ್ಟಾಗಿಯೇ ಇರುತ್ತವೆ  ಎಂದು ಮೈತ್ರಿಕೂಟದ ನಾಯಕರು ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪಕ್ಷದ ಅಗ್ರ ನಾಯಕ ರಾಹುಲ್ ಗಾಂಧಿಗೆ ಪ್ರಮುಖ ಹುದ್ದೆಯನ್ನು ನೀಡಲು ಇಂಡಿಯಾ ಮೈತ್ರಿ ಕೂಟದ ನಾಯಕರು ನಿರ್ಧರಿಸಿದ್ದಾರೆ.

Advertisement

ಲೋಕಸಭೆಯಲ್ಲಿ ಇಂಡಿಯಾ ಮೈತ್ರಿಕೂಟವು ಪ್ರತಿಪಕ್ಷದ ಸ್ಥಾನದಲ್ಲಿರುವುದರಿಂದ ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರನ್ನು ಒತ್ತಾಯಿಸಲಾಗಿದೆ.

ದೆಹಲಿಯಲ್ಲಿ ಶನಿವಾರ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಪಕ್ಷದ ವಕ್ತಾರ ಜೈರಾಮ್ ರಮೇಶ್ ಅವರು ಸಿಡಬ್ಲ್ಯೂಸಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Advertisement

ಸಿಡಬ್ಲ್ಯುಸಿ ಸಭೆಯಲ್ಲಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಬೇಕು ಎಂದು ಸರ್ವಾನುಮತದಿಂದ ಪ್ರಸ್ತಾಪಿಸಿದ್ದೇವೆ ಎಂದು ಕೆಸಿ ವೇಣುಗೋಪಾಲ್ ಹೇಳಿದರು. ಆದರೆ ಈ ಪ್ರಸ್ತಾಪದ ಬಗ್ಗೆ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದರು. ಆದಷ್ಟು ಬೇಗ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಎರಡೂ ಸ್ಥಾನಗಳನ್ನು ಗೆದ್ದಿರುವ ರಾಹುಲ್ ಗಾಂಧಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಯಾವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕೆ.ಸಿ.ವೇಣುಗೋಪಾಲ್ ಉತ್ತರಿಸಿದರು.

ರಾಯಬರೇಲಿ ಮತ್ತು ವಯನಾಡಿನಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಯಾವುದೇ ಸ್ಥಾನವನ್ನು ಬಿಟ್ಟುಕೊಡಲು ಇದೇ ತಿಂಗಳ 15 ರ ವರೆಗೆ ಸಮಯವಿದೆ ಎಂದು ಕೆಸಿ ವೇಣುಗೋಪಾಲ್ ಹೇಳಿದರು. ಆದರೆ ರಾಹುಲ್ ಗಾಂಧಿ ಈ 3 ಅಥವಾ 4 ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ.

ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡಿದರೆ ಪ್ರಧಾನಿ ಹುದ್ದೆಯನ್ನು ನೀಡುವುದಾಗಿ ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಷಯ ನನಗೆ ತಿಳಿದಿಲ್ಲ ಎಂದು ಅವರು ಹೇಳಿದರು.

Advertisement
Tags :
2024 Lok Sabha electionsnew Delhirahul gandhiಇಂಡಿಯಾ ಮೈತ್ರಿ ಕೂಟನವದೆಹಲಿಪ್ರಮುಖ ಹುದ್ದೆರಾಹುಲ್ ಗಾಂಧಿಲೋಕಸಭಾ ಚುನಾವಣೆ
Advertisement
Next Article