For the best experience, open
https://m.suddione.com
on your mobile browser.
Advertisement

ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ : ಸಿಎಂ ಸಿದ್ದರಾಮಯ್ಯ

05:36 PM Sep 03, 2024 IST | suddionenews
ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ   ಸಿಎಂ ಸಿದ್ದರಾಮಯ್ಯ
Advertisement

ಮೈಸೂರು, ಸೆಪ್ಟೆಂಬರ್ 03: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement
Advertisement

ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ನಡೆಸಿದ್ದು, ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನ, ಸವದತ್ತಿಯ ಎಲ್ಲಮ್ಮ, ಘಾಟಿ ಸುಬ್ಮಣ್ಯ ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಶುಕ್ತವಾರ, ಶನಿವಾರ ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ ಎಂದರು.

Advertisement

ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ. ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ. ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು. ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.

Advertisement

Tags :
Advertisement