ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಅರ್ಜಿ ವಜಾ..!
ನವದೆಹಲಿ: ಆದಾಯ ಮೀರಿ ಆಸ್ಕಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್ ಪ್ರಕರಣ ರದ್ದುಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಡಿಕೆ ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣ ರದ್ದುಕೋರಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು.
ಸಿಬಿಐ ತನಿಖೆ ನಡೆಸುತ್ತಿದೆ. ಈ ಪ್ರಕರಣ ರದ್ದು ಮಾಡಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಅದೇ ಕೇಸಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸುಪ್ರೀಂ ಕೋರ್ಟ್ ಈ ಸಂಬಂಧ ವಿಚಾರಣೆ ನಡೆಸಿದೆ. ಬೇಲಾ ತ್ರಿವೇದಿ ಅವರ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಡಿಕೆ ಶಿವಕುಮಾರ್ ಅವರ ಪರ ವಕೀಲರಾದ ರೋಹ್ಟಗಿ ಅವರು, ಒಂದೇ ಪ್ರಕರಣದಲ್ಲಿ ಎರಡು ರೀತಿಯಾದ ತನಿಖೆಯನ್ನು ಮಾಡುವುದಕ್ಕೆ ಬರುವುದಿಲ್ಲ. ಐಟಿ ದಾಳಿ ನಡೆದಿದ್ದಾಗ 41 ಲಕ್ಷ ಹಣ ಸಿಕ್ಕಿತ್ತು. ಆ ಕೇನ್ನ ಆದಾಯ ತೆರಿಗೆ ಈ ಕೇಸನ್ನು ನೋಡುತ್ತಾ ಇದೆ. ಆದರೆ ಸಿಬಿಐ ಇದರಲ್ಲಿ ತನಿಖೆ ನಡೆಸುವ ಅಗತ್ಯವಿಲ್ಲ. ಇದನ್ನು ರದ್ದು ಮಾಡಬೇಕು ಎಂದು ಮನವಿ ಮಾಡುತ್ತಾರೆ. ಆದರೆ ಬೇಲಾ ತ್ರಿವೇದಿ ಅವರಿದ್ದ ಪೀಠ ಇದನ್ನು ತಿರಸ್ಕರಿಸಿದೆ.
41 ಲಕ್ಷ ಸಿಕ್ಕಿರುವ ಹಣದ ಬಗ್ಗೆ ತನಿಖೆಯಾಗಬೇಕಿದೆ. ಐಟಿಗೆ ಕ್ರಮ ತೆಗೆದುಕೊಳ್ಳುವ ಅಧಿಕಾರ ಇರುವುದಿಲ್ಲ. ಹೀಗಾಗಿ ಅದರ ತನಿಖೆ ಆಗಬೇಕು. ಸಿಬಿಐ ತನಿಖೆ ನಡೆಸುತ್ತಿರುವುದು ಸರಿಯಾಗಿ ಇದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ.