ಇಬ್ರಾಹಿಂ ಉಚ್ಛಾಟನೆಗೆ ದೇವೇಗೌಡರು ಕೊಟ್ಟ ಕಾರಣವೇನು ಗೊತ್ತಾ..?
ಬೆಂಗಳೂರು: ಕಳೆದ ಕೆಲವು ತಿಂಗಳಿನಿಂದ ಇಬ್ರಾಹಿಂ ಹಾಗೂ ದಳಪತಿಗಳ ನಡುವೆ ಗುದ್ದಾಟ ನಡೆಯುತ್ತಲೆ ಇದೆ. ಇದೀಗ ಸಿ ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಈ ಸಂಬಂಧ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅನುಮೋದನೆಯನ್ನು ಪಡೆದುಕೊಳ್ಳಲಾಗಿದೆ. ಇದೇ ವೇಳೆ ಅವರ ಉಚ್ಛಾಟನೆ ಮಾಡಿದ್ದಕ್ಕೆ ದೇವೇಗೌಡ ಅವರು ಕಾರಣವನ್ನು ತಿಳಿಸಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡ್ರು, ಜೆಡಿಎಸ್ ನಿಂದ ಇಬ್ರಾಹಿಂ ಅವರನ್ನು ಉಚ್ಛಾಟಿಸಲು ಒಮ್ಮತದ ನಿರ್ಧಾರ ಮಾಡಲಾಗಿದೆ. ಇಬ್ರಾಹಿಂ ಅವರು ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂದಿದ್ದಾರೆ.
ಇದೇ ವೇಳೆ ಉಚ್ಛಾಟನೆ ಮಾಡಿದ್ದಕ್ಕೆ ಕಾರಣವನ್ನು ತಿಳಿಸಿದ್ದಾರೆ. ಇಬ್ರಾಹಿಂ ಅವರು ಎಲ್ಲಿಂದ ಎಲ್ಲಿಗೆ ಬಂದ್ರು..? ಎಷ್ಟು ಬದಲಾವಣೆಯಾಗಿದೆ ಎಂದು ಈಗ ಚರ್ಚೆ ಮಾಡುವುದು ಬೇಡ. ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಸಿ ಎಂ ಇಬ್ರಾಹಿಂ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿದ್ದಕ್ಕೆ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದ್ದರು. ಆದರೆ ಈಗ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿಯೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗೆ ಜೆಡಿಎಸ್ ಕೈಜೋಡಿಸಿದ್ದಾಗಿನಿಂದ ರಾಜ್ಯಾಧ್ಯಕ್ಷರಾಗಿದ್ದ ಇಬ್ರಾಹಿಂ ವಿರೋಧಿಸಿಕೊಂಡೆ ಬಂದರು. ಅಂದಿನಿಂದ ಕುಮಾರಸ್ವಾಮಿ ಹಾಗೂ ಇಬ್ರಾಹಿಂ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇತ್ತು. ಕಡೆಗೆ ನಮ್ಮದೇ ಒರಿಜಿನಲ್ ಜೆಡಿಎಸ್, ಕುಮಾರಸ್ವಾಮಿ ಅವರನ್ನೇ ಅಮಾನತು ಮಾಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ ಎಂಬೆಲ್ಲಾ ಮಾತುಗಳನ್ನು ಇಬ್ರಾಹಿಂ ಆಡುವುದಕ್ಕೆ ಶುರು ಮಾಡಿದ್ದರು. ಇದು ದೊಡ್ಡಗೌಡರನ್ನು ಕೆರಳಿಸಿದೆ. ಅದಾದ ನಂತರವೇ ರಾಜ್ಯಾಧ್ಯಕ್ಷರನ್ನಾಗಿ ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಲಾಗಿದೆ.