For the best experience, open
https://m.suddione.com
on your mobile browser.
Advertisement

ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು : ದೇವೇಗೌಡರ ಹೇಳಿಕೆಗೆ ಸಿದ್ದರಾಮಯ್ಯ ಉತ್ತರ

01:37 PM Jan 06, 2024 IST | suddionenews
ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು  ಶಾಪ ಕೊಡಬಾರದು   ದೇವೇಗೌಡರ ಹೇಳಿಕೆಗೆ ಸಿದ್ದರಾಮಯ್ಯ ಉತ್ತರ
Advertisement

ಬೆಂಗಳೂರು: ಕಾಂಗ್ರೆಸ್ ಮುಕ್ತ ರಾಜ್ಯದ ಬಗ್ಗೆ ಮಾಜಿ‌ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮಾತನಾಡಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಹಿರಿಯರು ಶಾಪ ಹಾಕಬಾರದು ಎಂದಿದ್ದಾರೆ.

Advertisement

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ.

Advertisement

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡ ಅವರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು "ಸಂಘ"ದೋಷದ ಫಲ.

Advertisement
Advertisement

ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನುಸರಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು.

ನನ್ನ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Tags :
Advertisement