For the best experience, open
https://m.suddione.com
on your mobile browser.
Advertisement

ದೇಶದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ : ಕಣದಲ್ಲಿ ಬಿರ್ಲಾ, ಸುರೇಶ್..!

02:43 PM Jun 25, 2024 IST | suddionenews
ದೇಶದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ   ಕಣದಲ್ಲಿ ಬಿರ್ಲಾ  ಸುರೇಶ್
Advertisement

Advertisement
Advertisement

ಸುದ್ದಿಒನ್ : ಲೋಕಸಭೆ ಸ್ಪೀಕರ್ ಹುದ್ದೆಗೆ ವಿರೋಧ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸಿವೆ. ಪ್ರತಿಪಕ್ಷಗಳ ಸ್ಪೀಕರ್ ಅಭ್ಯರ್ಥಿಯಾಗಿ ಕೆ.ಸುರೇಶ್ ಕಣಕ್ಕೆ ಇಳಿಯುತ್ತಿದ್ದಾರೆ. ಇದಕ್ಕಾಗಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮತ್ತೊಂದೆಡೆ, ಎನ್‌ಡಿಎ ಪರವಾಗಿ ಓಂ ಬಿರ್ಲಾ ಲೋಕಸಭೆ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದರು.

ಲೋಕಸಭೆ ಸ್ಪೀಕರ್ ಚುನಾವಣೆ ಜೂನ್ 26, ಬುಧವಾರ ನಡೆಯಲಿದೆ. ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು. ಇಲ್ಲಿಯವರೆಗೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ಆಯ್ಕೆಯಾಗುತ್ತಿತ್ತು. ಆದರೆ ಈ ಬಾರಿ ಈ ಸಂಪ್ರದಾಯ ಮುರಿಯುವ ಸಾಧ್ಯತೆ ಇದೆ.

Advertisement

ಇದಕ್ಕೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸ್ಪೀಕರ್ ಹುದ್ದೆಗೆ ಬೆಂಬಲ ಕೋರಿದರು. ವಿಪಕ್ಷಗಳು ಸ್ಪೀಕರ್ ಹುದ್ದೆಯನ್ನು ಬೆಂಬಲಿಸಲು ಸಿದ್ಧ, ಆದರೆ  ಉಪಸಭಾಪತಿ ಸ್ಥಾನವನ್ನು ವಿಪಕ್ಷಗಳಿಗೆ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದರು. ಆದರೆ ರಾಜನಾಥ್ ಸಿಂಗ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಇಂಡಿಯಾ ಮೈತ್ರಿಕೂಟದ ಪರವಾಗಿ ಸುರೇಶ್ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ.

Advertisement

ಕೆ ಸುರೇಶ್ ಯಾರು?

ಕೆ. ಸುರೇಶ್ 8 ಬಾರಿ ಅಂದರೆ 1989, 1991, 1996, 1999, 2009, 2014, 2019, 2024 ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆ ಸುರೇಶ್ ಕೇರಳದ ಮಾವೆಲಿಕ್ಕರ ಕ್ಷೇತ್ರದ ಕಾಂಗ್ರೆಸ್ ಸಂಸದ. ಈ ಮೊದಲು ಇವರು ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅತ್ಯಂತ ಅನುಭವಿ ಸಂಸದರಾಗಿದ್ದರೂ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಲಿಲ್ಲ ಎಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ್ದವು.

1989ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. 2009 ರಲ್ಲಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಕೆ ಸುರೇಶ್ ಅವರು ಅಕ್ಟೋಬರ್ 2012 ರಿಂದ 2014 ರವರೆಗೆ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Tags :
Advertisement