Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಯಾರು ಸಹ ಸರ್ಕಾರದ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಿ : ಶಾಸಕ ಟಿ.ರಘುಮೂರ್ತಿ ಸೂಚನೆ

07:16 PM Dec 23, 2024 IST | suddionenews
Advertisement

ಚಿತ್ರದುರ್ಗ : ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಏರ್ಪಡಿಸುವ ಪಿಂಚಣಿ ಅದಾಲತ್ (ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ) ಸೌಲಭ್ಯಗಳ ಸದುಪಯೋಗವನ್ನು ಅರ್ಹರು ಪಡೆಯಬೇಕು ಮತ್ತು ಯಾರು ಸಹ ಸರ್ಕಾರದ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದು ಶಾಸಕ ಮತ್ತು ಸಣ್ಣ ಕೈಗಾರಿಕೆಗಳು ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಪಿಂಚಣಿ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದರು.

ತುರುವನೂರು ಹೋಬಳಿಯಲ್ಲಿ ಇಂದು 50 ಫಲಾನುಭವಿಗಳಿಗೆ ಪಿಂಚಣಿ ಪ್ರಮಾಣ ವಿತರಿಸಿದ್ದೇವೆ. ತುರುವನೂರು ಹೋಬಳಿಯಲ್ಲಿ ಈಗಾಗಲೇ 8834 ಜನ ಫಲಾನುಭವಿಗಳು ಪಿಂಚಣಿ ಪಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಪಿಂಚಣಿ ಸೌಲಭ್ಯದಿಂದ ಎಲ್ಲಾರನ್ನೂ ಪಿಂಚಣಿ ಸೌಲಭ್ಯ ಒದಗಿಸಲು ಅಧಿಕಾರಿಗಳು ಪ್ರತಿ ಹಳ್ಳಿಯಲ್ಲಿ ಪರಿಶೀಲನೆ ನಡೆಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ತಾಕೀತು ಮಾಡಿದರು.

Advertisement

ತುರುವನೂರು ಗ್ರಾಮ ಮತ್ತು ಹೋಬಳಿಯ ಹಳ್ಳಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ತುರುವನೂರು ಗ್ರಾಮದಲ್ಲಿ ಡಿಗ್ರಿ ಕಾಲೇಜು ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಲಾಗುತ್ತಿದೆ.

ನಮ್ಮ ಸರ್ಕಾರದ ಜನಪ್ರಿಯ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ ಸೇರಿ ಸರ್ಕಾರದ ಸೌಲಭ್ಯದಿಂದ ಹೊರಗುಳಿದ ಕುಟುಂಬಗಳನ್ನು ಸರ್ಕಾರದ ಸೌಲಭ್ಯ ಪಡೆಯುವ ಕಡೆ ಜನರನ್ನು ಕರೆ ತರಬೇಕು ಎಂದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಉಪ ವಿಭಾಗಾಧಿಕಾರಿ ಕಾರ್ತಿಕ್, ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ, ಮಾ.ಜಿಪಂ ಸದಸ್ಯ ಬಾಬುರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರಾದ ಡಿ.ಆರ್.ಮಂಜುನಾಥ್, ನಾಗವೇಣಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಖಾಲಿಂ ಮತ್ತು ಇತರೆ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

Advertisement
Tags :
bengaluruchitradurgaGovernment FacilitieskannadaKannadaNewsMla t. Raghumurthysuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಬೆಂಗಳೂರುಶಾಸಕ ಟಿ.ರಘುಮೂರ್ತಿಸರ್ಕಾರದ ಸೌಲಭ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article