For the best experience, open
https://m.suddione.com
on your mobile browser.
Advertisement

ಜಿಮ್ ಸ್ಥಾಪನೆ : ಸಹಾಯಧನ ಅರ್ಜಿ ಆಹ್ವಾನ

07:10 PM Sep 05, 2024 IST | suddionenews
ಜಿಮ್ ಸ್ಥಾಪನೆ   ಸಹಾಯಧನ ಅರ್ಜಿ ಆಹ್ವಾನ
Advertisement

Advertisement
Advertisement

ಚಿತ್ರದುರ್ಗ. ಸೆಪ್ಟೆಂಬರ್. 05: 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಜಿಮ್ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Advertisement

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ತರಬೇತುದಾರರಿಂದ ಪರಿಶೀಲಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಿಂದ ದೃಢೀಕರಿಸಿ ಸೆ.27ರೊಳಗಾಗಿ, ಬೆಂಗಳೂರಿನ ಕೇಂದ್ರ ಕಚೇರಿಗೆ ಕಳುಹಿಸಿಕೊಡುವಂತೆ ಸೂಚಿಸಿದೆ. ಕೇಂದ್ರ ಕಚೇರಿಗೆ ನೇರವಾಗಿ ಬಂದ ಅರ್ಜಿಗಳನ್ನು ಹಾಗೂ ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Advertisement

Tags :
Advertisement