For the best experience, open
https://m.suddione.com
on your mobile browser.
Advertisement

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ...!

08:33 PM Oct 05, 2024 IST | suddionenews
exit poll 2024   ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ   ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ
Advertisement

Advertisement

ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್ 8 ರಂದು ಪ್ರಕಟವಾಗಲಿದೆ. ಆದರೆ ಇಂದು ಕೊನೆಯ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ವಿಭಿನ್ನ ಎಕ್ಸಿಟ್ ಪೋಲ್ ಗಳು ಹೊರ ಬರುತ್ತಿವೆ. ಹರ್ಯಾಣದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ವಿಶ್ಲೇಷಕರು. ಈ ಎಕ್ಸಿಟ್ ಪೋಲ್ ಪ್ರಕಾರ ಹತ್ತು ವರ್ಷಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಎಕ್ಸಿಟ್ ಪೋಲ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಸದ್ಯದ ರಾಜಕೀಯ ಪರಿಸ್ಥಿತಿ ನೋಡಿದರೆ ಹರಿಯಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ.

ಪೀಪಲ್ಸ್ ಪಲ್ಸ್ ಎರಡು ರಾಜ್ಯಗಳ ಎಕ್ಸಿಟ್ ಪೋಲ್ ಬಿಡುಗಡೆ ಮಾಡಿದೆ. ಈ ಸಂಸ್ಥೆಯ ಸಮೀಕ್ಷೆಯ ಪ್ರಕಾರ ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್‌ನ ಗೆಲುವು ಖಚಿತ ಎಂದು ಸೂಚಿಸುತ್ತದೆ. ಕಾಂಗ್ರೆಸ್ 55 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ ಕೇವಲ 26 ಸ್ಥಾನಗಳನ್ನು ಮಾತ್ರ ಪಡೆಯಬಹುದು. ಜೆಜೆಪಿಗೆ 1 ಮತ್ತು ಇತರರು 3 ರಿಂದ 5 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಆದರೆ ಈ ರಾಜ್ಯದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲ್ಲುವ ನಿರೀಕ್ಷೆಯಲ್ಲಿದೆ.

Advertisement

ಮತ್ತೊಂದೆಡೆ ಜಮ್ಮು-ಕಾಶ್ಮೀರದಲ್ಲಿ ಫಲಿತಾಂಶ ಅತಂತ್ರ ಆಗುವ ಸಾಧ್ಯತೆ ಇದೆ. ಆದರೆ ಪೀಪಲ್ಸ್ ಪಲ್ಸ್ ನಡೆಸಿದ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮತ್ತು 90 ಸ್ಥಾನಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 46 ರಿಂದ 50 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಎನ್‌ಡಿಎ ಮೈತ್ರಿಕೂಟಕ್ಕೆ 23ರಿಂದ 27 ಸ್ಥಾನಗಳು ಸಿಗುವ ಅವಕಾಶವಿದೆ. ಪಿಡಿಪಿಗೆ 7 ರಿಂದ 11 ಸ್ಥಾನಗಳು ಮತ್ತು ಇತರರು ನಾಲ್ಕರಿಂದ ಐದು ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ.

ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ. ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಬಾರಿಸಲಿದೆಯೇ ? ಅಥವಾ ಹತ್ತು ವರ್ಷಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆಯೇ ? ಈ ವಿಚಾರದಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಅಕ್ಟೋಬರ್ 8ರಂದು ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಹರಿಯಾಣದಲ್ಲಿ ಶೇ.61ರಷ್ಟು ಮತದಾನವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲೂ ಭಾರೀ ಮತದಾನ ದಾಖಲಾಗಿದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್

ಹರಿಯಾಣದಲ್ಲಿ

ಬಿಜೆಪಿ: 18-24

ಕಾಂಗ್ರೆಸ್: 55-62

JJP: 0-3

INLD: 3-6

AAP: 0

ಇತರೆ: 2-5

ಜಮ್ಮು ಮತ್ತು ಕಾಶ್ಮೀರ

ಹರಿಯಾಣದಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಹೇಳಿದೆ. ಹರ್ಯಾಣದಲ್ಲಿ ಕಾಂಗ್ರೆಸ್ ಪಕ್ಷ 55 ರಿಂದ 62 ಸ್ಥಾನಗಳಲ್ಲಿ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 18 ರಿಂದ 24 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಫಲಿತಾಂಶಗಳು ತೋರಿಸಿವೆ. ಜನನಾಯಕ ಜನತಾ ಪಕ್ಷ ಶೂನ್ಯದಿಂದ 3 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಮ್ಯಾಟ್ರಿಕ್ಸ್ ಎಕ್ಸಿಟ್ ಪೋಲ್ ಫಲಿತಾಂಶಗಳು ಐಎನ್‌ಎಲ್‌ಡಿ 3 ರಿಂದ 6 ಸ್ಥಾನಗಳನ್ನು ಗೆಲ್ಲಲಿದೆ ಮತ್ತು ಇತರರು 2 ರಿಂದ 5 ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಪ್ರಕಟಿಸಿದೆ.

Tags :
Advertisement